alex Certify
ಕನ್ನಡ ದುನಿಯಾ       Mobile App
       

Kannada Duniya

ಬಹ್ರೇನ್ ನಲ್ಲಿ ಸಿ.ಎಂ. ಹೊಗಳಿದ ರಾಹುಲ್ ಗಾಂಧಿ

ಮನಾಮ: ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ ಬಹ್ರೇನ್ ಪ್ರವಾಸದಲ್ಲಿದ್ದು, ಅನಿವಾಸಿ ಭಾರತೀಯರೊಂದಿಗೆ ಸಂವಾದ ನಡೆಸಿದ್ದಾರೆ.

ಸಂವಾದದಲ್ಲಿ ಮಾತನಾಡಿದ ಸಂದರ್ಭದಲ್ಲಿ ಕರ್ನಾಟಕದಲ್ಲಿ ನಡೆಯಲಿರುವ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಾವು ಜಯಗಳಿಸಿ ಮತ್ತೆ ಅಧಿಕಾರಕ್ಕೆ ಬರಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ಸಮರ್ಥ ನಾಯಕರಾಗಿದ್ದಾರೆ. ಕರ್ನಾಟಕದಲ್ಲಿ ನಮಗೆ ಪ್ರಬಲ ನಾಯಕರಿದ್ದು, ನಾವು ಮತ್ತೆ ಆಡಳಿತ ನಡೆಸುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಎನ್.ಡಿ.ಎ. ಸರ್ಕಾರ ಧರ್ಮ, ಜಾತಿಯ ಆಧಾರದ ಮೇಲೆ ಜನರನ್ನು ಒಡೆಯುತ್ತಿದೆ. ಇಂತಹ ವಿಭಜನೆಯ ಕಾರಣದಿಂದ ದೇಶ ಗಂಭೀರವಾದ ಸಮಸ್ಯೆಯನ್ನು ಎದುರಿಸುತ್ತಿದೆ ಎಂದು ಟೀಕಿಸಿದ್ದಾರೆ.

ನಾವೂ ಮನುಷ್ಯರೇ, ತಪ್ಪು ಮಾಡುವುದು ಸಹಜ. ಹೊಸ ದೃಷ್ಠಿಕೋನದೊಂದಿಗೆ ಪಕ್ಷವನ್ನು ಸಂಘಟಿಸುತ್ತಿದ್ದೇವೆ. ಮಾಧ್ಯಮಗಳಲ್ಲಿ ಏಕಪಕ್ಷೀಯ ಪ್ರಚಾರ ನಡೆಯುತ್ತಿದೆ. ಗುಜರಾತ್ ನಲ್ಲಿ ನಡೆದ ಚುನಾವಣೆಯಲ್ಲಿ ಸೋಲಿನಲ್ಲೂ ಗೆಲುವು ಕಂಡಿದ್ದೇವೆ ಎಂದು ಹೇಳಿದ್ದಾರೆ.

ನಿಮ್ಮೆಲ್ಲರ ಬೆಂಬಲವಿದ್ದರೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ. ಪಕ್ಷದಲ್ಲಿ ಯುವಕರು, ಹಿರಿಯರು ಉತ್ಸಾಹದಿಂದ ಕೆಲಸ ಮಾಡುತ್ತಿದ್ದಾರೆ. ನೀವೆಲ್ಲರೂ ಬದಲಾವಣೆಯನ್ನು ಕಾಣುವಿರಿ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...