alex Certify
ಕನ್ನಡ ದುನಿಯಾ       Mobile App
       

Kannada Duniya

ಪಾಕ್ ಚುನಾವಣೆಯಲ್ಲಿ ಕಣಕ್ಕಿಳಿಯುತ್ತಿದ್ದಾರೆ ಶಾರೂಕ್ ಸಂಬಂಧಿ

ಬಾಲಿವುಡ್ ಬಾದ್ ಶಾ ಶಾರೂಕ್ ಖಾನ್ ಅವರ ಸಂಬಂಧಿಯೋರ್ವರು, ಪಾಕಿಸ್ತಾನದಲ್ಲಿ ವಾಸ ಮಾಡುತ್ತಿದ್ದಾರೆ. ಆಕೆಯ ಹೆಸರು ನೂರ್ ಜಹಾನ್. ವರದಿಗಳ ಪ್ರಕಾರ, ನೂರ್ ಜಹಾನ್, ಪಾಕಿಸ್ತಾನದ ಖೈಬರ್-ಪಖ್ತುಂಕ್ವಾ ಪ್ರಾಂತ್ಯದಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ.

ಚುನಾವಣೆಗೆ ಸ್ಪರ್ಧಿಸಿರುವ ನೂರ್ ಜಹಾನ್ ತಮ್ಮ ಸಮಾಜಸೇವೆಯ ಕನಸುಗಳನ್ನು ಬಿಚ್ಚಿಟ್ಟಿದ್ದು, ತಾವು ಮಹಿಳಾ ಸಬಲೀಕರಣಕ್ಕೆ ಶ್ರಮಿಸಿ, ತಮ್ಮ ಕ್ಷೇತ್ರದಲ್ಲಿರುವ ಸಮಸ್ಯೆಗಳನ್ನು ಆಲಿಸಿ, ಅವುಗಳಿಗೆ ಪರಿಹಾರ ಒದಗಿಸಲು ಶ್ರಮಿಸುವುದಾಗಿ ತಿಳಿಸಿದ್ದಾರೆ.

ಈ ವಿಷಯ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆಯೇ ಶಾರೂಕ್ ಖಾನ್ ವಿರೋಧಿಗಳು ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಲು ಮುಂದಾಗಿದ್ದಾರೆ. ಟ್ರೋಲ್ ಗಳ ಸುರಿಮಳೆಯೇ ಆಗುತ್ತಿದ್ದು, ಪರ-ವಿರೋಧದ ಅಭಿಪ್ರಾಯಗಳೂ ವ್ಯಕ್ತವಾಗುತ್ತಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...