alex Certify
ಕನ್ನಡ ದುನಿಯಾ       Mobile App
       

Kannada Duniya

ಟ್ರಂಪ್-ಕಿಮ್ ಐತಿಹಾಸಿಕ ಭೇಟಿಗೆ ಸಿದ್ಧವಾಗಿದೆ ಸಿಂಗಾಪುರ್

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್-ಉನ್ ಐತಿಹಾಸಿಕ ಭೇಟಿಗೆ ಕ್ಷಣಗಣನೆ ಆರಂಭವಾಗಿದೆ. ಜೂನ್ 12ರಂದು ಉಭಯ ನಾಯಕರು ಭೇಟಿಯಾಗಲಿದ್ದು, ಇದಕ್ಕಾಗಿ ಸಿಂಗಾಪುರದಲ್ಲಿ ವ್ಯವಸ್ಥೆ ಮಾಡಲಾಗಿದೆ.

ಇದಕ್ಕಾಗಿ ಅಂತಿಮ ಕ್ಷಣದ ಸಿದ್ಧತೆ ನಡೆಸಲಾಗುತ್ತಿದ್ದು, ಸಿಂಗಾಪುರದ ಸೆಂಟೋಸಾ ಐಲ್ಯಾಂಡ್ ನಲ್ಲಿರುವ ಕೇಪೆಲ್ಲಾ ಹೋಟೆಲ್ ನಲ್ಲಿ ಟ್ರಂಪ್ ಹಾಗೂ ಕಿಮ್ ಮಾತುಕತೆ ನಡೆಸಲಿದ್ದಾರೆನ್ನಲಾಗಿದೆ.

ಈ ಹೋಟೆಲ್ ಗೆ ಈಗ ಸರ್ಪಗಾವಲು ವಿಧಿಸಲಾಗಿದ್ದು, ಹೋಟೆಲ್ ಸಿಬ್ಬಂದಿ ಹಾಗೂ ಭದ್ರತಾ ಸಿಬ್ಬಂದಿಯನ್ನು ಹೊರತುಪಡಿಸಿ ಬೇರೆಯವರಿಗೆ ಪ್ರವೇಶ ನಿಷೇಧಿಸಲಾಗಿದೆ. ಈ ಹೋಟೆಲ್ ನಿಂದ 10 ಕಿಮೀ ದೂರದಲ್ಲಿರುವ ಎರಡು ಐಷಾರಾಮಿ ಹೋಟೆಲ್ ಗಳಲ್ಲಿ ಡೊನಾಲ್ಡ್ ಟ್ರಂಪ್ ಹಾಗೂ ಕಿಮ್ ಜಾಂಗ್ ಉನ್ ತಂಗಲಿದ್ದಾರೆನ್ನಲಾಗಿದೆ.

ಅಮೆರಿಕದ ಹಿರಿಯ ಅಧಿಕಾರಿಗಳು ಈಗಾಗಲೇ ಸ್ಥಳ ಪರಿಶೀಲನೆ ನಡೆಸಿದ್ದು, ಭದ್ರತಾ ವ್ಯವಸ್ಥೆ ಕುರಿತು ಸಿಂಗಾಪುರ ಪೊಲೀಸರ ಜೊತೆ ಸಮಾಲೋಚನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...