alex Certify
ಕನ್ನಡ ದುನಿಯಾ       Mobile App
       

Kannada Duniya

ಆಫ್ಘಾನಿಸ್ತಾನದಲ್ಲಿ ಉಗ್ರರ ಅಟ್ಟಹಾಸ: 20 ಕ್ಕೂ ಹೆಚ್ಚು ಮಂದಿ ಸಾವು

1454908944_kabul-blast

ಆಫ್ಘಾನಿಸ್ತಾನದಲ್ಲಿ ಉಗ್ರರ ಅಟ್ಟಹಾಸ ಹೆಚ್ಚುತ್ತಿದ್ದು, ಇಲ್ಲಿನ ಬಾಲ್ಖಾ ಪ್ರಾಂತ್ಯದಲ್ಲಿನ ಮಝುರ್ ಇ ಷರೀಫ್ ​ನಲ್ಲಿರುವ ರಾಷ್ಟ್ರೀಯ ಆರ್ವಿು ಕೇಂದ್ರದ ಬಳಿ ಉಗ್ರರು ಆತ್ಮಾಹುತಿ ಬಾಂಬ್ ದಾಳಿ ನಡೆಸಿ ಹಲವರನ್ನು ಬಲಿ ಪಡೆದಿದ್ದಾರೆ.

ಆಫ್ಘಾನಿಸ್ತಾನದ ಮಿಲಿಟರಿ ಕೇಂದ್ರವನ್ನೇ ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದ್ದು, ಘಟನೆಯಲ್ಲಿ 20 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ತಿಳಿಸಿವೆ.

ಈಗಾಗಲೇ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ತಾಲಿಬಾನ್ ಉಗ್ರ ಸಂಘಟನೆ ಈ ದಾಳಿಯ ಹೊಣೆ ಹೊತ್ತಿದೆ. ಆಘಾತಕಾರಿ ಅಂಶವೆಂದರೆ ತಾಲಿಬಾನ್ ಉಗ್ರರು ಪ್ರತಿ ಬಾರಿಯೂ ಸಹ ಮಿಲಿಟರಿ ಅಥವಾ ಪೊಲೀಸರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...