alex Certify
ಕನ್ನಡ ದುನಿಯಾ       Mobile App
       

Kannada Duniya

ಮುಖಾಮುಖಿಯಾದ ರೈಲುಗಳು: ಹತ್ತಕ್ಕೂ ಹೆಚ್ಚು ಸಾವು

train-crash1_2730197g

ಭಾರತದಲ್ಲಿ ರೈಲು ಅವಘಡಗಳು ಸಾಮಾನ್ಯ. ಆದರೆ ತಂತ್ರಜ್ಞಾನದಲ್ಲಿ ಸಾಕಷ್ಟು ಮುಂದುವರೆದಿರುವ ಜರ್ಮನಿಯಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿಯಾಗಿ ಹತ್ತಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ ಘಟನೆ ನಡೆದಿದೆ.

ಹೌದು. ಇಲ್ಲಿನ ಬವಾರಿಯಾ ಎಂಬಲ್ಲಿ ಈ ಅವಘಡ ಸಂಭವಿಸಿದ್ದು, ಒಂದೇ ಹಳಿಯಲ್ಲಿ ಬಂದ 2 ರೈಲುಗಳು ಮುಖಾಮುಖಿಯಾಗಿ ಡಿಕ್ಕಿಯಾಗಿದೆ ಎನ್ನಲಾಗಿದೆ. ಘಟನೆಯಲ್ಲಿ 10 ಮಂದಿ ಸಾವನ್ನಪ್ಪಿದ್ದು 100 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈಗಾಗಲೇ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ.

ಅಲ್ಲದೇ ಸ್ಥಳದಲ್ಲಿ ಭರದಿಂದ ಕಾರ್ಯಾಚರಣೆ ನಡೆಯುತ್ತಿದ್ದು, ಇನ್ನುಳಿದ ರೈಲು ಸಂಚಾರವನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಸಿಬ್ಬಂದಿ ಕಾರ್ಯನಿರತರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...