alex Certify
ಕನ್ನಡ ದುನಿಯಾ       Mobile App
       

Kannada Duniya

ರೈಲಿನಲ್ಲಿ ಹಸ್ತಮೈಥುನ ಮಾಡ್ತಿದ್ದವನಿಗೆ ಚಾಕು ಇರಿದ ಮಹಿಳೆ

ಮಹಿಳೆಯರ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿದೆ. ಇದಕ್ಕೆ ಅಮೆರಿಕಾ ಕೂಡ ಹೊರತಾಗಿಲ್ಲ.ಆದ್ರೆ ಇತ್ತೀಚೆಗೆ ಮಹಿಳೆಯರು ತಮ್ಮ ಮೇಲಾಗ್ತಿರುವ ದೌರ್ಜನ್ಯದ ವಿರುದ್ಧ ದನಿ ಎತ್ತುತ್ತಿದ್ದಾರೆ. ನ್ಯೂಯಾರ್ಕ್ ಸಬ್ ವೇ ಟ್ರೈನ್ ನಲ್ಲಿ ಪ್ರಯಾಣಿಸುವಾಗ ಮಹಿಳೆ ಮುಂದೆ ಹಸ್ತಮೈಥುನ ಮಾಡ್ತಿದ್ದವನಿಗೆ ಮಹಿಳೆ ತಕ್ಕ ಪಾಠ ಕಲಿಸಿದ್ದಾಳೆ.

ಆತನ ವಿರುದ್ಧ ತಿರುಗಿ ಬಿದ್ದ ಮಹಿಳೆ ಚಾಕುವಿನಿಂದ ಆತನ ಮೇಲೆ ಹಲ್ಲೆ ನಡೆಸಿದ್ದಾಳೆ. ಘಟನೆಯಲ್ಲಿ ಮಹಿಳೆ ಕೂಡ ಗಾಯಗೊಂಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮಹಿಳೆ ಹಾಗೂ ಆರೋಪಿ ಇಬ್ಬರಿಗೂ ಚಿಕಿತ್ಸೆ ನೀಡಲಾಗ್ತಿದೆ.

42 ವರ್ಷದ ಮಹಿಳೆ ಕೆಲಸ ಮುಗಿಸಿ ರಾತ್ರಿ ಮನೆಗೆ ಹೋಗ್ತಿದ್ದಳು ಎನ್ನಲಾಗಿದೆ. ಟ್ರೈನ್ ನಲ್ಲಿ ಮಹಿಳೆ ನಿದ್ರೆ ಮಾಡಿದ್ದಾಳೆ. ಎಚ್ಚರವಾಗ್ತಿದ್ದಂತೆ ಆಕೆ ಮುಂದೆ ವ್ಯಕ್ತಿಯೊಬ್ಬ ಹಸ್ತಮೈಥುನ ಮಾಡ್ತಿದ್ದ. ಮಹಿಳೆ ಅದನ್ನು ನೋಡಿ ಕೂಗಿಕೊಂಡಿದ್ದಾಳೆ. ಆರೋಪಿ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಧೈರ್ಯ ಮಾಡಿ ಚಾಕು ಕಸಿದುಕೊಂಡ ಮಹಿಳೆ ಆತನ ಎದೆ ಹಾಗೂ ಕಾಲಿನ ಮೇಲೆ ಹಲ್ಲೆ ನಡೆಸಿದ್ದಾಳೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...