alex Certify
ಕನ್ನಡ ದುನಿಯಾ       Mobile App
       

Kannada Duniya

ಓರ್ವನ ಆತ್ಮಹತ್ಯೆ, ಇನ್ನಿಬ್ಬರಿಗೆ ಹೃದಯಾಘಾತ : ಪಾಕ್ ಕುಟುಂಬದಲ್ಲಿ ದುರಂತ

ಪಾಕಿಸ್ತಾನದ ಕುಟುಂಬವೊಂದು ದುರಂತ ಅಂತ್ಯ ಕಂಡಿದೆ. ಓರ್ವ ಆತ್ಮಹತ್ಯೆ ಮಾಡಿಕೊಂಡ್ರೆ, ಇನ್ನಿಬ್ಬರು ಸಹೋದರರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. 35 ವರ್ಷದ ಜಾಹಿದ್ ಅಲಿ ಎಂಬಾತ ತನಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ.

ಜಾಹಿದ್ ನ ಆತ್ಮಹತ್ಯೆಯ ಸುದ್ದಿ ಕೇಳಿ ಹಿರಿಯ ಸಹೋದರ 40 ವರ್ಷದ ಅಬ್ಬಾಸ್ ಅಲಿಗೆ ಹೃದಯಾಘಾತವಾಗಿದೆ. ಕೂಡಲೇ ಅವನನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯ್ತು. ಆದ್ರೆ ಮಾರ್ಗಮಧ್ಯೆಯೇ ಆತ ಕೊನೆಯುಸಿರೆಳೆದಿದ್ದ.

ಇಬ್ಬರ ಮೃತದೇಹವನ್ನೂ ಅವರ ನಿವಾಸಕ್ಕೆ ತರಲಾಯ್ತು. ಆಗ ಕಿರಿಯ ಸಹೋದರ 28 ವರ್ಷದ ಸದ್ದಾಂ ಅಲಿಗೆ ಹೃದಯಾಘಾತ ಸಂಭವಿಸಿದೆ. ಸ್ಥಳದಲ್ಲೇ ಆತ ಸಾವನ್ನಪ್ಪಿದ್ದಾನೆ. ಒಮ್ಮೆಲೇ ಮೂವರು ಮಕ್ಕಳನ್ನೂ ಕಳೆದುಕೊಂಡ ಕುಟುಂಬ ಸ್ಮಶಾನಸದೃಶವಾಗಿದೆ. ಇಡೀ ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...