alex Certify
ಕನ್ನಡ ದುನಿಯಾ       Mobile App
       

Kannada Duniya

ಭೀಕರ ರೈಲು ದುರಂತದಲ್ಲಿ 36 ಮಂದಿ ಸಾವು

rail-dd

ಕೈರೋ: ಪ್ಯಾಸೆಂಜರ್ ರೈಲುಗಳು ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 36 ಮಂದಿ ಸಾವನ್ನಪ್ಪಿದ್ದು, ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ಗಾಯಗೊಂಡಿದ್ದಾರೆ.

ಈಜಿಪ್ಟ್ ನ ಮೆಡಿಟರೇನಿಯನ್ ಬಂದರು ನಗರವಾಗಿರುವ ಅಲೆಕ್ಸಾಂಡ್ರಿಯಾದಲ್ಲಿ ನಿಂತಿದ್ದ ಪ್ಯಾಸೆಂಜರ್ ರೈಲಿಗೆ ಹಿಂಬದಿಯಿಂದ ಬಂದ ಮತ್ತೊಂದು ಪ್ಯಾಸೆಂಜರ್ ರೈಲು ಡಿಕ್ಕಿ ಹೊಡೆದಿದೆ.

ಈಜಿಪ್ಟ್ ರಾಜಧಾನಿ ಕೈರೋಗೆ ಸಂಚರಿಸುತ್ತಿದ್ದ ರೈಲು ಅಲೆಕ್ಸಾಂಡ್ರಿಯಾದಲ್ಲಿ ನಿಂತಿದ್ದ ರೈಲಿಗೆ ಡಿಕ್ಕಿ ಹೊಡೆದು 36 ಮಂದಿ ಸಾವನ್ನಪ್ಪಿದ್ದು, 100 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಅವರಲ್ಲಿ ಹೆಚ್ಚಿನವರ ಸ್ಥಿತಿ ಚಿಂತಾಜನಕವಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಘಟನಾ ಸ್ಥಳದಲ್ಲಿ ಚಿಕಿತ್ಸೆ ನೀಡಿದ ವೈದ್ಯ ಡಾ. ಅಬು ಹೋಮ್ಸ್ ಹೇಳಿದ್ದಾರೆ.

ಸಿಗ್ನಲ್ ಸರಿಯಾಗಿ ಕೊಡದಿರುವುದೇ ಅಪಘಾತಕ್ಕೆ ಕಾರಣವೆನ್ನಲಾಗಿದ್ದು, ಈಜಿಪ್ಟ್ ರೈಲ್ವೇ ಇಲಾಖೆ ಘಟನೆಯ ತನಿಖೆಗೆ ಆದೇಶಿಸಿದೆ. ಈ ವರ್ಷ ಸಂಭವಿಸಿದ ರೈಲು ದುರಂತದಲ್ಲಿ 100 ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...