alex Certify
ಕನ್ನಡ ದುನಿಯಾ       Mobile App
       

Kannada Duniya

ಪಾಕ್ ಪ್ರಧಾನಿಯಾಗುತ್ತಿದ್ದಂತೆಯೇ ಇಮ್ರಾನ್ ಖಾನ್ ಗೆ ಕಾದಿದೆ ‘ಬಿಗ್ ಶಾಕ್’

ಪಾಕಿಸ್ತಾನದಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದಿದ್ದರೂ ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ನೇತೃತ್ವದ ಪಾಕಿಸ್ತಾನ್ ತೆಹ್ರಿಕ್ ಇ ಇನ್ಸಾಫ್ ಪಕ್ಷ ಅತ್ಯಧಿಕ ಸ್ಥಾನ ಗಳಿಸಿದ್ದು, ಇತರೆ ಪಕ್ಷದ ಸದಸ್ಯರ ಸಹಾಯದಿಂದ ಪ್ರಧಾನಿಯಾಗಿ ಇಮ್ರಾನ್ ಖಾನ್ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

ಇದರ ಮಧ್ಯೆ ಇದುವರೆಗೂ ರಕ್ಷಣಾ ವಿಷಯಗಳಿಗೆ ಸಂಬಂಧಿಸಿದಂತೆ ಪಾಕಿಸ್ತಾನಕ್ಕೆ ಆರ್ಥಿಕ ನೆರವು ನೀಡುತ್ತಾ ಬಂದಿದ್ದ ಅಮೆರಿಕಾ, ಈಗ ನೆರವಿನ ಪ್ರಮಾಣವನ್ನು ಗಣನೀಯವಾಗಿ ಕಡಿತಗೊಳಿಸಲು ಮುಂದಾಗಿದ್ದು, ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ಇಮ್ರಾನ್ ಖಾನ್ ಗೆ ಬಹುದೊಡ್ಡ ಸವಾಲು ಎದುರಾಗುವುದು ಖಚಿತವಾಗಿದೆ.

ಪಾಕಿಸ್ತಾನ ಉಗ್ರರ ಸ್ವರ್ಗವಾಗಿ ಪರಿಣಮಿಸಿರುವ ಕಾರಣ ಅಮೆರಿಕಾ ಹಂತ ಹಂತವಾಗಿ ಆರ್ಥಿಕ ನೆರವು ಕಡಿತಗೊಳಿಸುತ್ತ ಬಂದಿದ್ದು, ಪ್ರಸಕ್ತ 700 ಮಿಲಿಯನ್ ಡಾಲರ್ ನೆರವು ನೀಡಿದರೆ ಮುಂದೆ ಅದು ಕೇವಲ 150 ಮಿಲಿಯನ್ ಡಾಲರ್ ಗಳಿಗೆ ಇಳಿಕೆಯಾಗಲಿದೆ ಎನ್ನಲಾಗಿದೆ.

ಅದರಲ್ಲೂ ಇಮ್ರಾನ್ ಖಾನ್ ನೇತೃತ್ವದ ಪಾಕಿಸ್ತಾನ್ ತೆಹ್ರಿಕ್ ಇ ಇನ್ಸಾಫ್ ಪಕ್ಷ ಉಗ್ರರ ಕುರಿತು ಮೃದು ಧೋರಣೆ ತಳೆಯುತ್ತಿರುವುದು ಮುಂದಿನ ದಿನಗಳಲ್ಲಿ ಅಮೆರಿಕಾದೊಂದಿಗಿನ ಪಾಕಿಸ್ತಾನದ ಬಾಂಧವ್ಯಕ್ಕೆ ಧಕ್ಕೆ ತರಬಹುದು ಎಂದು ಭಾವಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...