alex Certify
ಕನ್ನಡ ದುನಿಯಾ       Mobile App
       

Kannada Duniya

ವೈರಲ್ ಆಗಿದೆ ವಿಜಯ್ ಮಲ್ಯರ ಈ ಫೋಟೋ

malya-maly

ಬರ್ಮಿಂಗ್ ಹ್ಯಾಂ: ದೇಶದ ವಿವಿಧ ಬ್ಯಾಂಕ್ ಗಳಿಗೆ ಸುಮಾರು 9000 ಕೋಟಿ ರೂ. ಪಂಗನಾಮ ಹಾಕಿರುವ ಉದ್ಯಮಿ ವಿಜಯ್ ಮಲ್ಯ ಭಾರತದಿಂದ ಪರಾರಿಯಾಗಿದ್ದು, ಇಂಗ್ಲೆಂಡ್ ನಲ್ಲಿ ನೆಲೆಸಿದ್ದಾರೆ.

ಭಾನುವಾರ ಬರ್ಮಿಂಗ್ ಹ್ಯಾಂನ ಎಡ್ಜ್ ಬಾಸ್ಟನ್ ಮೈದಾನದಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಟೀಂ ಇಂಡಿಯಾ ಮತ್ತು ಪಾಕಿಸ್ತಾನ ನಡುವೆ ನಡೆದ ಐ.ಸಿ.ಸಿ. ಚಾಂಪಿಯನ್ಸ್ ಟ್ರೋಫಿ ಪಂದ್ಯವನ್ನು ಮಲ್ಯ ವೀಕ್ಷಿಸಿದ್ದಾರೆ.

ಎಡ್ಜ್ ಬಾಸ್ಟನ್ ಮೈದಾನದಲ್ಲಿ ವಿಜಯ್ ಮಲ್ಯ ಪಂದ್ಯ ವೀಕ್ಷಿಸಿದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.

ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಲೀಕರಾಗಿ ಮಿಂಚಿದ್ದ ಮಲ್ಯ ಈಗ ಇಂಗ್ಲೆಂಡ್ ನಲ್ಲಿ ನೆಲೆಸಿದ್ದಾರೆ. ಅವರಿಂದ ಸಾಲ ವಸೂಲಿಗೆ ಬ್ಯಾಂಕ್ ಗಳು ಮುಗಿಬಿದ್ದಿವೆ. ತನಿಖಾ ಸಂಸ್ಥೆಗಳು ಬಂಧನಕ್ಕೆ ಬಲೆ ಬೀಸಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...