alex Certify
ಕನ್ನಡ ದುನಿಯಾ       Mobile App
       

Kannada Duniya

ರೈಲಿನಲ್ಲಿ ಜನಿಸಿದ ಮಗುವಿಗೆ ಬಂಪರ್ ಆಫರ್

ಮಹಿಳೆಯೊಬ್ಬಳು ರೈಲಿನಲ್ಲೇ ಮಗುವಿಗೆ ಜನ್ಮ ನೀಡಿದ್ದು, ಇದೀಗ ಆ ಮಗುವಿಗೆ 25 ವರ್ಷದವರೆಗೂ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಲು ರೈಲ್ವೆ ಇಲಾಖೆ ಮುಂದಾಗಿದೆ.

ಸೋಮವಾರದಂದು ಫ್ರೆಂಚ್ ರಾಜಧಾನಿ ಪ್ಯಾರಿಸ್ ನಲ್ಲಿ ಮಹಿಳೆಯೊಬ್ಬರು ರೈಲಿನಲ್ಲಿ ಪ್ರಯಾಣಿಸುವ ವೇಳೆ ಹೆರಿಗೆ ನೋವು ಅನುಭವಿಸಿದ್ದಾರೆ. ಕೂಡಲೇ ರೈಲನ್ನು ನಿಲ್ಲಿಸಲಾಗಿದ್ದು, ಸಹ ಪ್ರಯಾಣಿಕರು ಹಾಗೂ ರೈಲ್ವೆ ಮಹಿಳಾ ಸಿಬ್ಬಂದಿ ಸುಸೂತ್ರ ಹೆರಿಗೆಗೆ ನೆರವಾಗಿದ್ದಾರೆ.

ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದು, ಹೆರಿಗೆ ಸಂದರ್ಭದಲ್ಲಿ ಹೆಚ್ಚಿನ ರೈಲು ಸಂಚಾರವಿರುವ ಈ ಮಾರ್ಗದಲ್ಲಿ ಸುಮಾರು 45 ನಿಮಿಷಗಳ ಕಾಲ ಎಲ್ಲ ರೈಲುಗಳ ಸಂಚಾರವನ್ನು ನಿಲ್ಲಿಸಲಾಗಿತ್ತು. ತಾಯಿ-ಮಗು ಆರೋಗ್ಯವಾಗಿದ್ದು, ಇವರುಗಳನ್ನು ಅಭಿನಂದಿಸಿರುವ ಪ್ಯಾರಿಸ್ ರೈಲ್ವೆ ಇಲಾಖೆ, ಮಗುವಿಗೆ 25 ವರ್ಷಗಳ ಕಾಲ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವುದಾಗಿ ಘೋಷಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...