alex Certify
ಕನ್ನಡ ದುನಿಯಾ       Mobile App
       

Kannada Duniya

ಅಮ್ಮನಂತೆ ನಟಿಸಿ ಬಾಲಕಿಯನ್ನು ರಕ್ಷಿಸಿದ ಮಹಿಳೆ

ಅಮ್ಮನಂತೆ ನಾಟಕವಾಡಿ ಮಹಿಳೆಯೊಬ್ಬಳು ಬಾಲಕಿಯ ಅಪಹರಣವನ್ನು ತಪ್ಪಿಸಿದ್ದಾಳೆ. ಕ್ಯಾಲಿಫೋರ್ನಿಯಾದ ಮಾರ್ಟಿನೆಜ್ ಎಂಬ ಬಾಲಕಿ ಸಾಂತಾ ಅನಾ ಸ್ಕೂಲ್ ಗೆ ಹೋಗುತ್ತಿದ್ಲು. ಆಗ ದುಷ್ಕರ್ಮಿಯೊಬ್ಬ ಬಾಲಕಿಯನ್ನು ಅಪಹರಿಸಲು ಯತ್ನಿಸಿದ್ದಾನೆ.

ಇದನ್ನು ಗಮನಿಸಿದ ಕ್ಲೌಡಿಯಾ ಎಂಬ ಮಹಿಳೆ ಬಾಲಕಿಯ ಅಮ್ಮನಂತೆ ಪೋಸು ಕೊಟ್ಟಿದ್ದಾಳೆ. ಬಾಲಕಿಯ ಹೆಗಲ ಮೇಲೆ ಕೈಹಾಕಿಕೊಂಡು ಸುಮ್ಮನೇ ನಡೆದುಕೊಂಡು ಹೋಗಿದ್ದಾಳೆ. ಅಪರಿಚಿತ ಮಹಿಳೆ ತನ್ನನ್ನು ಕರೆದೊಯ್ತಿರೋದನ್ನು ನೋಡಿ ಬಾಲಕಿ ಗಾಬರಿಯಿಂದ ಅಳಲಾರಂಭಿಸಿದ್ಲು.

ಸ್ಪ್ಯಾನಿಶ್ ಭಾಷೆ ಮಾತನಾಡ್ತಿದ್ದ ಮಹಿಳೆ ಬಾಲಕಿಗೆ ಸಮಾಧಾನ ಮಾಡಲು ಪ್ರಯತ್ನಿಸಿದ್ದಾಳೆ. ನಂತರ ಅವಳನ್ನು ಶಾಲೆಯವರೆಗೂ ಕಳಿಸಿಕೊಟ್ಟು, ಅಲ್ಲಿನ ಅಧಿಕಾರಿಗಳಿಗೆ ನಡೆದ ಘಟನೆ ಬಗ್ಗೆ ಮಾಹಿತಿ ನೀಡಿದ್ದಾಳೆ. ಮಹಿಳೆಯ ಸಮಯ ಪ್ರಜ್ಞೆಯಿಂದಾಗಿ ಬಾಲಕಿ ಬಚಾವ್ ಆಗಿದ್ದಾಳೆ. ಅಪಹರಣಕಾರರಿಂದ ತನ್ನನ್ನು ಕಾಪಾಡಿದ ಮಹಿಳೆ ನಿಜಕ್ಕೂ ಧೈರ್ಯವಂತೆ ಎನ್ನುತ್ತಿದ್ದಾಳೆ ಈಗ ಆ ಬಾಲಕಿ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...