alex Certify
ಕನ್ನಡ ದುನಿಯಾ       Mobile App
       

Kannada Duniya

‘ಕಾಂಗ್ರೆಸ್–ಬಿ.ಜೆ.ಪಿ.ಗೆ ಸೋಲಿನ ಭಯ’

ಕಾಂಗ್ರೆಸ್, ಬಿ.ಜೆ.ಪಿ. ಪಕ್ಷಗಳಿಗೆ ಸೋಲಿನ ಭಯ ಕಾಡುತ್ತಿದ್ದು, ನಮ್ಮ ಪಕ್ಷದ ಮುಖಂಡರನ್ನು ಸೆಳೆಯುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ಜೆ.ಡಿ.ಎಸ್. ನಾಯಕ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ವಿಜಯಪುರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ ಪ್ರಚಾರ ನಡೆಸಿದ ಕಡೆಯಲ್ಲೆಲ್ಲಾ ಕಾಂಗ್ರೆಸ್ ಕುಸಿತ ಕಂಡಿದೆ. ಅವರು ನಡೆಸಿದ ಜನಾಶೀರ್ವಾದ ಯಾತ್ರೆ ಜನಾಕರ್ಷಿಸುವಲ್ಲಿ ಯಶಸ್ವಿಯಾಗಿಲ್ಲ. ಯಾತ್ರೆಗೆ ಜನ ಸೇರಲಿಲ್ಲ ಎಂದು ಟೀಕಿಸಿದ್ದಾರೆ.

ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್. ಬಿ.ಜೆ.ಪಿ. ಮೇಲೆ ರಾಜ್ಯದ ಜನ ವಿಶ್ವಾಸ ಕಳೆದುಕೊಂಡಿದ್ದಾರೆ. ಜೆ.ಡಿ.ಎಸ್. ಮುಖಂಡರನ್ನು ಆ ಪಕ್ಷಗಳು ಸೆಳೆಯುತ್ತಿವೆ. ಅವರಿಗೆ ಸೋಲಿನ ಭಯ ಕಾಡುತ್ತಿದೆ. ಜೆ.ಡಿ.ಎಸ್.ನಿಂದ ಯಾರೇ ಹೋದರೂ, ಪಕ್ಷದ ಓಟ ತಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಪದೇ ಪದೇ ಮುಖ್ಯಮಂತ್ರಿಯವರು ಅವರಪ್ಪನಾಣೆ ಗೆಲ್ಲಲ್ಲ ಎಂದು ಹೇಳುವುದು ಸರಿಯಲ್ಲ ಎಂದು ಹೆಚ್.ಡಿ.ಕೆ. ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...