alex Certify
ಕನ್ನಡ ದುನಿಯಾ       Mobile App
       

Kannada Duniya

ಇಲ್ಲಿದೆ ಕರ್ನಾಟಕದ ಮುಖ್ಯಮಂತ್ರಿಗಳ ಕುರಿತ ಇಂಟ್ರೆಸ್ಟಿಂಗ್ ಮಾಹಿತಿ

ರಾಜ್ಯದ ಆಡಳಿತಾತ್ಮಕ ಮುಖ್ಯಸ್ಥರಾದ ಮುಖ್ಯಮಂತ್ರಿ ಹುದ್ದೆಗೇರಲು ರಾಜಕೀಯ ನಾಯಕರಲ್ಲಿ ತೀವ್ರ ಪೈಪೋಟಿ ನಡೆದಿದೆ. ವಿಧಾನಸಭೆ ಚುನಾವಣೆ ನಡೆಯುತ್ತಿರುವ ಈ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿಗಳ ಕುರಿತಾದ ವಿಶೇಷ ಮಾಹಿತಿ ಇಲ್ಲಿದೆ.

ಸ್ವಾತಂತ್ರ್ಯ ಬಂದಾಗಿನಿಂದ 22 ಮಂದಿ ಕರ್ನಾಟಕದ ಮುಖ್ಯಮಂತ್ರಿಗಳಾಗಿದ್ದು, ಮೈಸೂರು ರಾಜ್ಯದ(1973 ನವೆಂಬರ್ 1 ರಂದು ಕರ್ನಾಟಕ ರಾಜ್ಯ ನಾಮಕರಣ) ಮೊದಲ ಮುಖ್ಯಮಂತ್ರಿ ಕೆ.ಸಿ. ರೆಡ್ಡಿ ಆಗಿದ್ದಾರೆ.

ಅಧಿಕಾರ ನಡೆಸಿದವರ ಪೈಕಿ ದೇವರಾಜ ಅರಸ್ ಅತಿ ಹೆಚ್ಚು ಅವಧಿಗೆ (7 ವರ್ಷ) ಮುಖ್ಯಮಂತ್ರಿಯಾಗಿದ್ದರೆ, ಬಿ.ಎಸ್. ಯಡಿಯೂರಪ್ಪ 7 ದಿನ ಮುಖ್ಯಮಂತ್ರಿಯಾಗಿ ಅತಿ ಕಡಿಮೆ ಅವಧಿಯ ಮುಖ್ಯಮಂತ್ರಿಯಾಗಿದ್ದರು. ನಂತರದಲ್ಲಿ ನಡೆದ ಚುನಾವಣೆಯಲ್ಲಿ ಬಿ.ಜೆ.ಪಿ. ಅಧಿಕಾರಕ್ಕೆ ಬಂದು ಯಡಿಯೂರಪ್ಪ ಮತ್ತೊಮ್ಮೆ ಮುಖ್ಯಮಂತ್ರಿಯಾದರೂ, ಪೂರ್ಣಾವಧಿ ಅಧಿಕಾರ ನಡೆಸಲಾಗಲಿಲ್ಲ.

ಕಾಂಗ್ರೆಸ್ ಮುಖ್ಯಮಂತ್ರಿಗಳು ಹೆಚ್ಚು ಅವಧಿಗೆ ಅಧಿಕಾರ ನಡೆಸಿದ್ದಾರೆ. ಕಾಂಗ್ರೆಸ್ಸೇತರ ಮುಖ್ಯಮಂತ್ರಿ ರಾಮಕೃಷ್ಣ ಹೆಗ್ಡೆ 3 ಸಲ ಮುಖ್ಯಮಂತ್ರಿಯಾಗಿದ್ದರು. ಇನ್ನು ಮುಖ್ಯಮಂತ್ರಿಯಾಗಿದ್ದಾಗಲೇ ಭಾರತದ ಪ್ರಧಾನಿ ಹುದ್ದೆಗೇರಿದ ಹೆಗ್ಗಳಿಕೆ ಹೆಚ್.ಡಿ. ದೇವೇಗೌಡರದ್ದಾಗಿದೆ.

ಮುಖ್ಯಮಂತ್ರಿಯಾಗಿದ್ದ ಬಿ.ಡಿ. ಜತ್ತಿ ಭಾರತದ 5 ನೇ ಉಪರಾಷ್ಟ್ರಪತಿಗಳಾಗಿದ್ದರು. ಒಮ್ಮೆ ಮುಖ್ಯಮಂತ್ರಿಯಾಗಿದ್ದ ವೀರೇಂದ್ರ ಪಾಟೀಲರು ಮತ್ತೊಮ್ಮೆ ಮುಖ್ಯಮಂತ್ರಿ ಹುದ್ದೆಗೇರಿದಾಗ 18 ವರ್ಷ ಗ್ಯಾಪ್ ಆಗಿತ್ತು. ದೇವೇಗೌಡರು ಮತ್ತು ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾದ ತಂದೆ–ಮಗ ಆಗಿದ್ದಾರೆ.

ಕರ್ನಾಟಕದಲ್ಲಿ 6 ಬಾರಿ ರಾಷ್ಟ್ರಪತಿ ಆಡಳಿತ ಹೇರಲಾಗಿದೆ. ಸಿದ್ಧರಾಮಯ್ಯ 2013 ರ ಮೇ 13 ರಂದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಈ ಚುನಾವಣೆಯಲ್ಲಿ ಕಾಂಗ್ರೆಸ್, ಜೆ.ಡಿ.ಎಸ್., ಬಿ.ಜೆ.ಪಿ. ಅಧಿಕಾರಕ್ಕೆ ಬಂದಲ್ಲಿ ಮುಖ್ಯಮಂತ್ರಿ ಹುದ್ದೆಗೇರುವವರು ಒಮ್ಮೆ ಮುಖ್ಯಮಂತ್ರಿಗಳಾಗಿದ್ದವರೇ ಆಗಿರುತ್ತಾರೆ ಎನ್ನುವುದು ವಿಶೇಷವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...