alex Certify
ಕನ್ನಡ ದುನಿಯಾ       Mobile App
       

Kannada Duniya

ಏನಾಗಲಿದೆ 2622 ಅಭ್ಯರ್ಥಿಗಳ ಭವಿಷ್ಯ…?

ರಾಜ್ಯ ವಿಧಾನಸಭೆಗೆ ಮೇ 12 ರಂದು ನಡೆದ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಕಣದಲ್ಲಿರುವ 2622 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

ಶೇ. 72.13 ರಷ್ಟು ಮತದಾನವಾಗಿದ್ದು, 3,65,63,085 ಮಂದಿ ಮತ ಚಲಾಯಿಸಿದ್ದಾರೆ. 2405 ಪುರುಷರು, 217 ಮಹಿಳಾ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇವರಲ್ಲಿ ಬಿ.ಜೆ.ಪಿ.ಯ 222, ಕಾಂಗ್ರೆಸ್ ನ 220, ಜೆ.ಡಿ.ಎಸ್.ನ 199, ಬಿ.ಎಸ್.ಪಿ.ಯ 18 ಹಾಗೂ 1165 ಪಕ್ಷೇತರ ಅಭ್ಯರ್ಥಿಗಳು ಸೇರಿದ್ದಾರೆ.

ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದೆ. ಈಗಾಗಲೇ ಮತ ಎಣಿಕೆ ಕೇಂದ್ರಗಳಲ್ಲಿ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಅಭ್ಯರ್ಥಿಗಳು, ಬೆಂಬಲಿಗರು, ಕಾರ್ಯಕರ್ತರು ಎಣಿಕೆ ಕೇಂದ್ರದತ್ತ ಆಗಮಿಸತೊಡಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...