alex Certify
ಕನ್ನಡ ದುನಿಯಾ       Mobile App
       

Kannada Duniya

ಅನಂತಕುಮಾರ್ ‘ಅಂತಿಮ ಯಾತ್ರೆ’ ಆರಂಭ

ಸೋಮವಾರದಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾದ ಕೇಂದ್ರ ಸಚಿವ ಅನಂತ ಕುಮಾರ್ ಅವರ ಅಂತ್ಯ ಸಂಸ್ಕಾರ, ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ನಡೆಯಲಿದ್ದು ಈಗ ಅಂತಿಮ ಯಾತ್ರೆ ಆರಂಭಗೊಂಡಿದೆ.

ಸೋಮವಾರದಂದು ಅನಂತ ಕುಮಾರ್ ಅವರ ನಿವಾಸದಲ್ಲಿಯೇ ಅಂತಿಮ ದರ್ಶನಕ್ಕೆ ಪಾರ್ಥಿವ ಶರೀರವನ್ನು ಇರಿಸಲಾಗಿದ್ದು, ಇಂದು ಬೆಳಗ್ಗೆ ಬಿಜೆಪಿ ಕಚೇರಿಯಲ್ಲಿ ಕೆಲ ಹೊತ್ತು, ಆ ಬಳಿಕ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.

ಇದೀಗ ಅನಂತಕುಮಾರ್ ಅವರ ಪಾರ್ಥಿವ ಶರೀರದ ಅಂತಿಮ ಯಾತ್ರೆ ಆರಂಭವಾಗಿದ್ದು, ಪಂಪ ಮಹಾಕವಿ ರಸ್ತೆ, ಬುಲ್ ಟೆಂಪಲ್ ರೋಡ್, ಉಮಾ ಟಾಕೀಸ್, ಟಿ.ಆರ್. ಮಿಲ್ ಮಾರ್ಗವಾಗಿ ಚಾಮರಾಜಪೇಟೆಯ ಹಿಂದೂ ರುದ್ರಭೂಮಿ ತಲುಪಲಿದೆ.

ಪುರೋಹಿತ ಶ್ರೀನಾಥ್ ಅವರ ನೇತೃತ್ವದ ತಂಡ, ಅಂತಿಮ ವಿಧಿವಿಧಾನಗಳ ಪ್ರಕ್ರಿಯೆ ನಡೆಸಿಕೊಡಲಿದ್ದು, ಅನಂತಕುಮಾರ್ ಅವರ ಸಹೋದರ ನಂದಕುಮಾರ್ ಈ ವಿಧಾನಗಳನ್ನು ಪೂರೈಸಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...