alex Certify
ಕನ್ನಡ ದುನಿಯಾ       Mobile App
       

Kannada Duniya

ಅನಂತ ಕುಮಾರ್ ಅಂತಿಮ ದರ್ಶನಕ್ಕಾಗಿ ಬೆಂಗಳೂರಿಗೆ ಬಂದ ಪ್ರಧಾನಿ

ಇಂದು ಬೆಳಗಿನ ಜಾವ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾದ ಕೇಂದ್ರ ಸಚಿವ ಅನಂತ ಕುಮಾರ್ ಅವರ ಅಂತ್ಯಸಂಸ್ಕಾರ, ನಾಳೆ ಮಧ್ಯಾಹ್ನ ಚಾಮರಾಜ ಪೇಟೆಯ ರುದ್ರಭೂಮಿಯಲ್ಲಿ ನೆರವೇರಲಿದೆ.

ಗಣ್ಯರು ಹಾಗೂ ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಅನಂತ ಕುಮಾರ್ ಅವರ ಪಾರ್ಥಿವ ಶರೀರವನ್ನು ಲಾಲ್ ಬಾಗ್ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಇರಿಸಲಾಗಿದ್ದು, ತಮ್ಮ ಸಚಿವ ಸಂಪುಟದ ಸಹೋದ್ಯೋಗಿಯ ಅಂತಿಮ ದರ್ಶನಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಆಗಮಿಸಿದ್ದಾರೆ.

ವಾರಣಾಸಿಯಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿನ ಎಚ್.ಎ.ಎಲ್. ಏರ್ಪೋರ್ಟ್ ನಲ್ಲಿ ಬಂದಿಳಿದ ಪ್ರಧಾನಿ ನರೇಂದ್ರ ಮೋದಿಯವರನ್ನು ರಾಜ್ಯಪಾಲ ವಜುಭಾಯ್ ವಾಲಾ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿ ಸ್ವಾಗತಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ರಸ್ತೆ ಮಾರ್ಗವಾಗಿ ನೇರವಾಗಿ ಅನಂತ ಕುಮಾರ್ ಅವರ ನಿವಾಸಕ್ಕೆ ತೆರಳಿದ್ದು, ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲಿದ್ದಾರೆ. ಈ ವೇಳೆ ಅನಂತಕುಮಾರ್ ಅವರ ಕುಟುಂಬ ಸದಸ್ಯರು ಮಾತ್ರ ಉಪಸ್ಥಿತರಿರಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...