alex Certify
ಕನ್ನಡ ದುನಿಯಾ       Mobile App
       

Kannada Duniya

ವಿಶೇಷ ವಿಮಾನದಲ್ಲಿ ದೆಹಲಿಗೋಗುವ ಹಕ್ಕ- ಬುಕ್ಕರು..!

Kumaraswamy_11ಡಿ.ವೈ.ಎಸ್.ಪಿ. ಗಳಾದ ಕಲ್ಲಪ್ಪ ಹಂಡಿಭಾಗ್ ಹಾಗೂ ಎಂ.ಕೆ. ಗಣಪತಿಯವರ ಆತ್ಮಹತ್ಯೆ ಪ್ರಕರಣದಲ್ಲಿ ಸರ್ಕಾರದ ವಿರುದ್ದ ಮುಗಿ ಬಿದ್ದಿರುವ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ ಇಂದು ಮತ್ತೆ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಚಿವ ಕೆ.ಜೆ. ಜಾರ್ಜ್ ಅವರನ್ನು ರಕ್ಷಿಸುತ್ತಿರುವ ಕುರಿತಂತೆ ಪ್ರಸ್ತಾಪಿಸಿ, ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಹೇಳಿದಂತೆ ದೆಹಲಿಗೆ ಸೂಟ್ ಕೇಸ್ ತೆಗೆದುಕೊಂಡು ಹೋಗಿ ಕೊಡುವ ವಿಚಾರದಲ್ಲಿ ಮುಖ್ಯಮಂತ್ರಿಗಳಿಗೆ ಜಾರ್ಜ್ ಸಹಕರಿಸುತ್ತಿದ್ದಾರೆ. ಹೀಗಾಗಿಯೇ ಹಕ್ಕ- ಬುಕ್ಕರು ವಿಶೇಷ ವಿಮಾನದಲ್ಲಿ ಹಲವು ಬಾರಿ ದೆಹಲಿಗೆ ಹೋಗಿ ಬಂದಿದ್ದಾರೆ ಎಂದರು.

ತಾವು ದಲಿತ ಪರ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಮೈಸೂರು ಜಿಲ್ಲಾಧಿಕಾರಿ ಶಿಖಾ ಅವರಿಗೆ ತಮ್ಮ ಆಪ್ತ ಮರಿಗೌಡನಿಂದಲೇ ಅವಮಾನವಾಗಿದ್ದರೂ ಆತನ ರಕ್ಷಣೆಗೆ ನಿಂತಿದ್ದಾರೆ. ಇದಕ್ಕಾಗಿ ಶಿಖಾ ಅವರ ಜೊತೆ ರಾಜಿ ಸಂಧಾನ ನಡೆಸುವ ಪ್ರಯತ್ನ ನಡೆದಿವೆ. ಈ ಸರ್ಕಾರದಲ್ಲಿ ನಿಷ್ಟಾವಂತ ಅಧಿಕಾರಿಗಳು ಕೆಲಸ ಮಾಡಲಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕುಮಾರಸ್ವಾಮಿ ಆರೋಪಿಸಿದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...