alex Certify
ಕನ್ನಡ ದುನಿಯಾ       Mobile App
       

Kannada Duniya

ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶವನ್ನು ಬೆಂಬಲಿಸಿದ ಸಿರಿಗೆರೆ ಶ್ರೀಗಳು

ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಎಲ್ಲ ವಯೋಮಾನದ ಮಹಿಳೆಯರಿಗೆ ಪ್ರವೇಶ ನೀಡುವಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿರುವ ಬೆನ್ನಲ್ಲೇ ಈಗ ಪರ-ವಿರೋಧ ಚರ್ಚೆಗಳು ನಡೆಯುತ್ತಿದ್ದು, ತೀರ್ಪು ಮರು ಪರಿಶೀಲಿಸುವಂತೆ ಅರ್ಜಿಯನ್ನೂ ಸಲ್ಲಿಸಲಾಗಿದೆ.

ಇದೀಗ ಈ ವಿವಾದದ ಕುರಿತು ಮಾತನಾಡಿರುವ ಸಿರಿಗೆರೆಯ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರು, ಶಬರಿಮಲೆಯ ಸ್ವಾಮಿ ಅಯ್ಯಪ್ಪನ ದರ್ಶನಕ್ಕೆ ಮಹಿಳೆಯರು ಪ್ರವೇಶಿಸದಂತೆ ತಡೆಯುತ್ತಿರುವುದು ಸರಿಯಲ್ಲವೆಂದು ಹೇಳಿದ್ದಾರಲ್ಲದೆ, ಸಂಪ್ರದಾಯಗಳನ್ನು ನಾವುಗಳು ವೈಚಾರಿಕ ನೆಲೆಗಟ್ಟಿನಲ್ಲಿ ನೋಡಬೇಕಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸುಪ್ರೀಂ ಕೋರ್ಟ್ ಈಗ ನೀಡಿರುವ ತೀರ್ಪನ್ನು ವಚನಕಾರರು 12ನೇ ಶತಮಾನದಲ್ಲೇ ನೀಡಿದ್ದರು ಎಂದು ಹೇಳಿದ ಶ್ರೀಗಳು, ಇಂತಹ ಆಧುನಿಕ ಯುಗದಲ್ಲೂ ಲಿಂಗ ತಾರತಮ್ಯ ನಡೆಸುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...