alex Certify
ಕನ್ನಡ ದುನಿಯಾ       Mobile App
       

Kannada Duniya

ಸಣ್ಣ ಪುಟ್ಟ ಘಟನೆ ಹೊರತುಪಡಿಸಿ ಶಾಂತಿಯುತ ಮತದಾನ

13-harnahalli vote queqe..

ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಯ ಮೊದಲ ಹಂತದ ಚುನಾವಣೆಗೆ ಇಂದು ಮತದಾನ ನಡೆಯುತ್ತಿದ್ದು, ಸಣ್ಣಪುಟ್ಟ ಘಟನೆ ಹೊರತುಪಡಿಸಿ ಬಹುತೇಕ ಶಾಂತಿಯುತವಾಗಿ ಮತದಾನ ನಡೆದಿದೆ.

ಮತದಾರರು ಉತ್ಸಾಹದಿಂದಲೇ ಮತ ಚಲಾಯಿಸುತ್ತಿದ್ದು, ಬೆಳಗ್ಗೆ 7 ರಿಂದಲೇ ಮತದಾನ ಆರಂಭವಾಯಿತು. 8 ಗಂಟೆ ಸುಮಾರಿಗೆ ಮತದಾರರು ನಿಗದಿತ ಮತಗಟ್ಟೆಗಳಿಗೆ ತೆರಳಿ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು.

ಬೆಳಗ್ಗೆ 9 ರ ವೇಳೆಗೆ ಬಹುತೇಕ ಮತಗಟ್ಟೆಗಳಲ್ಲಿ ಸರತಿ ಸಾಲು ಹೆಚ್ಚಾಗಿತ್ತು. ಮತಗಟ್ಟೆಯ ಸಿಬ್ಬಂದಿ ತಮಗೆ ನಿಗದಿಪಡಿಸಿದ ಮತಗಟ್ಟೆಗಳಲ್ಲಿ ಎಲ್ಲಾ ಪರಿಕರಗಳೊಂದಿಗೆ ಸಿದ್ಧರಾಗಿದ್ದರು. ಬೆಳಗ್ಗೆ 7 ರಿಂದ ಮತದಾನ ಆರಂಭವಾಗಿದ್ದು, ಮಧ್ಯಾಹ್ನದ ವೇಳೆಗೆ ಚುರುಕಾಗಿದೆ.

ಅಧಿಕಾರ ವಿಕೇಂದ್ರಿಕರಣದ ಪ್ರಮುಖ ಹಂತವಾಗಿರುವ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ಈ ಬಾರಿ ಹೆಚ್ಚಿನ ಗಮನ ಸೆಳೆದಿದೆ. ಪ್ರಮುಖ ಮುಖಂಡರು, ಪ್ರಮುಖರ ಮಕ್ಕಳು ಕಣದಲ್ಲಿದ್ದಾರೆ. ಅಲ್ಲದೆ, ಕೆಲವು ಕ್ಷೇತ್ರಗಳಲ್ಲಿ ಬಂಡಾಯ ಅಭ್ಯರ್ಥಿಗಳು ಪಕ್ಷಗಳ ಅಧಿಕೃತ ಅಭ್ಯರ್ಥಿಗಳ ಗೆಲುವಿಗೆ ಅಡ್ಡಗಾಲಾಗುವ ಸಾಧ್ಯತೆ ಇದೆ.

ಈಗಾಗಲೇ ಮತದಾರರು ಅಭ್ಯರ್ಥಿಗಳ ಹಣೆಬರಹ ಬರೆಯತೊಡಗಿದ್ದಾರೆ. ಕೆಲವು ಕಡೆಗಳಲ್ಲಿ ಮತದಾನ ಬಹಿಷ್ಕಾರದ ವರದಿಗಳು ಬಂದಿವೆ. ನಂತರ ಅಧಿಕಾರಿಗಳು ಮತದಾರರ ಮನವೊಲಿಸಲು ಪ್ರಯತ್ನ ನಡೆಸಿದರು. ಈ ಮೊದಲೆ ಗುರುತಿಸಲಾಗಿದ್ದ ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಮತಗಟ್ಟೆಗಳ ಮೇಲೆ ಹಾಗೂ ನಕ್ಸಲ್ ಪೀಡಿತ ಪ್ರದೇಶಗಳ ವ್ಯಾಪ್ತಿಯ ಮತಗಟ್ಟೆಗಳಲ್ಲಿ ಹೆಚ್ಚಿನ ನಿಗಾ ವಹಿಸಲಾಗಿತ್ತು.

ಮತಗಟ್ಟೆಯ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಿತ ಪ್ರದೇಶ ಘೋಷಿಸಲಾಗಿತ್ತು. ಈ ಪ್ರದೇಶದಲ್ಲಿ ಯಾವುದೇ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಮತದಾರರ ಮನವೊಲಿಕೆ ಮಾಡದಂತೆ ಸೂಚನೆ ನೀಡಲಾಗಿತ್ತು. ಚುನಾವಣೆ ಅಂಗವಾಗಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಪೊಲೀಸ್ ಇಲಾಖೆಯಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಮತ್ತು ಸುಗಮವಾಗಿ ಚುನಾವಣೆ ನಡೆಸಲು ಕ್ರಮ ಕೈಗೊಳ್ಳಲಾಗಿದೆ.

ಹಳ್ಳಿಗಳಲ್ಲಿ ಜನ, ನಗರದಲ್ಲಿ ವಿರಳ: ಚುನಾವಣೆ ಹಿನ್ನೆಲೆಯಲ್ಲಿ ಆಯಾ ವ್ಯಾಪ್ತಿಯಲ್ಲಿ ಸರ್ಕಾರಿ ರಜೆ ಘೋಷಿಸಲಾಗಿದೆ. ಗ್ರಾಮಾಂತರದಲ್ಲಿ ಚುನಾವಣೆ ನಡೆದು, ರಜೆ ಘೋಷಣೆಯಾಗಿದ್ದರೂ ನಗರಗಳಲ್ಲಿಯೂ ರಜೆಯ ವಾತಾವರಣ ಕಂಡುಬರುತ್ತಿದೆ. ವಾಹನ ಸಂಚಾರ ವಿರಳವಾಗಿದ್ದು, ಜನರೆಲ್ಲಾ ಹಳ್ಳಿಗಳತ್ತ ಮುಖ ಮಾಡಿದ್ದರು. ಹಳ್ಳಿಗಳಲ್ಲಿ ಮತ ಹೊಂದಿರುವವರೆಲ್ಲಾ ಮತದಾನಕ್ಕೆ ತೆರಳಿದ್ದರು.

Related News

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...