alex Certify
ಕನ್ನಡ ದುನಿಯಾ       Mobile App
       

Kannada Duniya

ಹೆಜ್ಜೇನು ದಾಳಿಗೆ ಇಬ್ಬರು ಅಸ್ವಸ್ಥ

honey bee

ಬೆಂಗಳೂರು: ವಿಹಾರಕ್ಕೆ ಬಂದವರ ಮೇಲೆ ಜೇನು ನೊಣ ದಾಳಿ ಮಾಡಿದ ಪರಿಣಾಮ, ಇಬ್ಬರು ಅಸ್ವಸ್ಥಗೊಂಡ ಘಟನೆ ಲಾಲ್ ಭಾಗ್ ನಲ್ಲಿ ನಡೆದಿದೆ. ಫಲಪುಷ್ಪ ಪ್ರದರ್ಶನವನ್ನು ವೀಕ್ಷಿಸಲು ಬಂದಿದ್ದ ಇಬ್ಬರು ಲಾಲ್ ಭಾಗ್ ನಲ್ಲಿ ಸುತ್ತಾಡುತ್ತಿದ್ದರು.

ಈ ವೇಳೆ ಜೇನು ನೊಣದ ಹಿಂಡು ಏಕಾಏಕಿ ದಾಳಿ ಮಾಡಿದ್ದು, ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಲಾಲ್ ಭಾಗ್ ಕೆರೆ ದಂಡೆಯ ಮೇಲಿನಿಂದ ಜೇನು ನೊಣಗಳು ದಾಳಿ ಮಾಡಿವೆ ಎನ್ನಲಾಗಿದೆ. ಶಿವರಾಜ್ ಮತ್ತು ಹನುಮಂತೇ ಗೌಡ ಎಂಬುವವರು ದಾಳಿಗೆ ಒಳಗಾದವರು. ಇವರು ಫಲಪುಷ್ಪ ಪ್ರದರ್ಶನ ವೀಕ್ಷಣೆಗೆ ಆಗಮಿಸಿದ್ದ ಸಂದರ್ಭದಲ್ಲಿ ಏಕಾಏಕಿ ಜೇನು ನೊಣಗಳು ದಾಳಿ ಮಾಡಿವೆ. ಇಬ್ಬರೂ ಅಸ್ವಸ್ಥಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಎನ್ನಲಾಗಿದೆ.

ಲಾಲ್ ಭಾಗ್ ವೆಸ್ಟ್ ಗೇಟ್ ಸಮೀಪದ ಖಾಸಗಿ ಆಸ್ಪತ್ರೆಗೆ ಅವರನ್ನು ಸೇರಿಸಲಾಗಿದ್ದು, ತೀವ್ರವಾಗಿ ಅಸ್ವಸ್ಥರಾಗಿದ್ದಾರೆ. ಅವರಿಗೆ ಚಿಕಿತ್ಸೆ ನೀಡಲಾಗಿದ್ದು, ಪೊಲೀಸರಿಗೆ ಮಾಹಿತಿ ನೀಡಲಾಗಿದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...