alex Certify
ಕನ್ನಡ ದುನಿಯಾ       Mobile App
       

Kannada Duniya

ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ

ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆಯಾದ ಘಟನೆ ಹಾವೇರಿ ತಾಲೂಕು ಕೋಳೂರು ಗ್ರಾಮದಲ್ಲಿ ನಡೆದಿದೆ.

ನಾಪತ್ತೆಯಾಗಿದ್ದ 12 ವರ್ಷದ ಬಾಲಕ ಶರಣಪ್ಪ ಕಳಸಣ್ಣವರ ಮೃತದೇಹ ಕೋಳೂರು ಗ್ರಾಮದ ಕೆರೆಯಲ್ಲಿ ಪತ್ತೆಯಾಗಿದೆ. ಜೂನ್ 3 ರ ಸಂಜೆ ಆಟವಾಡಲು ಮನೆಯಿಂದ ಹೊರಹೋಗಿದ್ದ ಬಾಲಕ ಶರಣಪ್ಪ ಬಳಿಕ ನಾಪತ್ತೆಯಾಗಿದ್ದ.

ಬಾಲಕ ಶವವಾಗಿ ಪತ್ತೆಯಾಗಿರುವ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಹಾವೇರಿ ಗ್ರಾಮೀಣ ಪೊಲೀಸ್‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...