alex Certify
ಕನ್ನಡ ದುನಿಯಾ       Mobile App
       

Kannada Duniya

ಜಿಪಂ- ತಾಪಂ ಚುನಾವಣೆ: ಫಲಿತಾಂಶ ಪ್ರಕಟಣೆ ಆರಂಭ

Mar2214Udupichik01

ಬೆಂಗಳೂರು: ಎರಡು ಹಂತಗಳಲ್ಲಿ ನಡೆದಿದ್ದ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಸದ್ಯಕ್ಕೆ ಆಡಳಿತರೂಢ ಕಾಂಗ್ರೆಸ್ ಪಕ್ಷ ಮೊದಲ ಸ್ಥಾನದಲ್ಲಿದ್ದರೆ, ಬಿಜೆಪಿ ದ್ವಿತೀಯ ಹಾಗೂ ಜೆಡಿಎಸ್ ತೃತೀಯ ಸ್ಥಾನದಲ್ಲಿದೆ.

ಮೂರು ಪ್ರಮುಖ ಪಕ್ಷಗಳಿಗೂ ಪ್ರತಿಷ್ಟೆಯ ಪ್ರಶ್ನೆಯಾಗಿರುವ ಈ ಚುನಾವಣೆಯ ಮತ ಎಣಿಕೆ ಇಂದು ಬೆಳಿಗ್ಗೆ 8 ಗಂಟೆಯಿಂದಲೇ ಆರಂಭಗೊಂಡಿದ್ದು, ಹಲವು ಕ್ಷೇತ್ರಗಳ ಫಲಿತಾಂಶ ಈಗಾಗಲೇ ಪ್ರಕಟಗೊಂಡಿದೆ.

ಹಾಸನ ಜಿಲ್ಲೆಯ ಹಳೇಕೋಟೆ ಜಿಲ್ಲಾ ಪಂಚಾಯಿತಿ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಜಯ ಸಾಧಿಸಿದ್ದಾರೆ. ರಾಮನಗರ ಜಿಲ್ಲೆ ಮಾಳೂರು ಜಿಲ್ಲಾ ಪಂಚಾಯತ್ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಕಣಕ್ಕಿಳಿದಿದ್ದ ಶಾಸಕ ಸಿ.ಪಿ. ಯೋಗೇಶ್ವರ್ ಅವರ ಸಹೋದರ ಸಿ.ಪಿ. ರಾಜೇಶ್ ಗೆಲುವು ಸಾಧಿಸಿದ್ದಾರೆ.

ಶಿವಮೊಗ್ಗ ಜಿಲ್ಲೆ ಹೊಳಲೂರು ಜಿಲ್ಲಾ ಪಂಚಾಯತ್ ಕ್ಷೇತ್ರದಿಂದ ಕಣಕ್ಕಿಳಿದಿದ್ದ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಅವರ ಪುತ್ರ ಕಾಂತೇಶ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಸಿಂಗನಮನೆ ಜಿಲ್ಲಾ ಪಂಚಾಯತ್ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಮಾಜಿ ಸಚಿವ ಸಿ.ಎಂ ಇಬ್ರಾಹಿಂ ಅವರ ಸಹೋದರ ಸಿ.ಎಂ. ಸಾದಿಕ್, ಜೆಡಿಎಸ್ ಅಭ್ಯರ್ಥಿ ಯೋಗೇಶ್ ವಿರುದ್ದ ಪರಾಭವ ಕಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...