alex Certify
ಕನ್ನಡ ದುನಿಯಾ       Mobile App
       

Kannada Duniya

ಅತ್ಯಾಚಾರ ಮಾಡಿ ಕೊಲೆಗೈದವ ಗೋವಾ ಪೊಲೀಸರಿಗೆ ಸೆರೆಯಾದ

ಮಧ್ಯ ವಯಸ್ಕ ಮಹಿಳೆ ಮೇಲೆ ಅತ್ಯಾಚಾರ ನಡೆಸಿ ಬಳಿಕ ಆಕೆಯನ್ನು ಕೊಲೆಗೈದ ಕರ್ನಾಟಕ ಮೂಲದ ಯುವಕನನ್ನು ಗೋವಾ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಅತ್ಯಾಚಾರಿ ಹಾಗೂ ಕೊಲೆಗಾರ ಬೆಳಗಾವಿ ಮೂಲದ 23 ವರ್ಷ ಪ್ರಾಯದ ಮಂಜುನಾಥ ದೊಡ್ಮನಿ ಎಂದು ಪೊಲೀಸರು ತಿಳಿಸಿದ್ದಾರೆ.

ಹಳೇ ಗೋವಾ ಪ್ರದೇಶದಲ್ಲಿ ಮಹಿಳೆಯ ಶವ ಪತ್ತೆಯಾದ ಹಿನ್ನೆಲೆಯಲ್ಲಿ ತನಿಖೆಗಿಳಿದ ಪೊಲೀಸರು ಶನಿವಾರ ಮಂಜುನಾಥನನ್ನು ಪತ್ತೆ ಮಾಡಿ ಬಂಧಿಸಿದ್ದಾರೆ. ಹಳೇ ಗೋವಾದಲ್ಲಿ ಪೋಷಕರೊಂದಿಗೆ ನೆಲೆಸಿರುವ ಮಂಜುನಾಥ ಬುಧವಾರ ರಾತ್ರಿ ಮಹಿಳೆಗೆ ಡ್ರಾಪ್ ಕೊಡುವುದಾಗಿ ವಾಹನದಲ್ಲಿ ಕರೆದುಕೊಂಡು ಹೋಗಿ, ನಂತರ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಾನೆ. ಬಳಿಕ ಆಕೆಯನ್ನು ಕೊಲೆಗೈದಿದ್ದಾನೆ ಎಂಬುದಾಗಿ ಆತ ವಿಚಾರಣೆಯಲ್ಲಿ ಒಪ್ಪಿಕೊಂಡಿರುವುದಾಗಿ ಎಸ್‍ಪಿ ಚಂದನ್ ಚೌಧರಿ ತಿಳಿಸಿದ್ದಾರೆ.

ಅತ್ಯಾಚಾರ ಹಾಗೂ ಕೊಲೆ ಮಾಡಿರುವುದು ಮರಣೋತ್ತರ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಪ್ರಕರಣ ಸಂಬಂಧ ಮತ್ತಷ್ಟು ತನಿಖೆಗಾಗಿ 15 ಪೊಲೀಸರ ತಂಡವನ್ನು ರಚಿಸಿ ಜವಾಬ್ದಾರಿ ವಹಿಸಲಾಗಿದೆ ಎಂದು ಚೌಧರಿ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...