alex Certify
ಕನ್ನಡ ದುನಿಯಾ       Mobile App
       

Kannada Duniya

ಟ್ರಾಕ್ಟರ್ ಪಲ್ಟಿ: 26 ಜನರಿಗೆ ಗಾಯ

ಬಳ್ಳಾರಿ: ಗಂಗೆ ಪೂಜೆಗೆಂದು ತೆರಳಿದವರು ವಾಪಸ್ ಆಗುತ್ತಿದ್ದಾಗ ಟ್ಯಾಕ್ಟರ್ ಪಲ್ಟಿಯಾಗಿ 26 ಜನರು ಗಾಯಗೊಂಡಿದ್ದು, ಆರು ಮಂದಿಯ ಸ್ಥಿತಿ ಗಂಭೀರವಾಗಿರುವ ಘಟನೆ ಬಳ್ಳಾರಿ ಜಿಲ್ಲೆ ಹಂಪಿ ಬಳಿ ನಡೆದಿದೆ.

ಇಲ್ಲಿನ ಕೃಷ್ಣ ಬಜಾರ್ ಸಮೀಪ ಈ ಅಪಘಾತ ಸಂಭವಿಸಿದೆ. ಗಾಯಾಳುಗಳು ಹೊಸಪೇಟೆ ತಾಲೂಕಿನ ಮಲಪನಗುಡಿಯಿಂದ ಹಂಪಿಗೆ ಗಂಗೆ ಪೂಜೆಗೆಂದು ತೆರಳಿದ್ದರು ಎನ್ನಲಾಗಿದೆ.

ಗಾಯಾಳುಗಳಲ್ಲಿ ರಾಜು(10), ಬೈರ (19), ಶಂಕರ(17), ಉಮೇಶ(10), ಪಕೀರಮ್ಮ(40) ಮತ್ತು ತಾಯಮ್ಮ (40) ಎಂಬವರ ಸ್ಥಿತಿ ಗಂಭೀರವಾಗಿದೆ. ಅವರನ್ನು ಬಳ್ಳಾರಿಯ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದ ಗಾಯಾಳುಗಳಿಗೆ ಹೊಸಪೇಟೆಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಕುರಿತು ಹಂಪಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...