alex Certify
ಕನ್ನಡ ದುನಿಯಾ       Mobile App
       

Kannada Duniya

ಸ್ಮಾರ್ಟ್ ಸಿಟಿ ಪಟ್ಟಿಯಲ್ಲಿ ಬೆಂಗಳೂರಿಗೆ ಸ್ಥಾನ

smartcitiesಕೇಂದ್ರ ಸರ್ಕಾರ ಇಂದು ಬಿಡುಗಡೆ ಮಾಡಿದ ಸ್ಮಾರ್ಟ್ ಸಿಟಿಗಳ ಪಟ್ಟಿಯಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿಗೆ ಕೊನೆಗೂ ಸ್ಥಾನ ಸಿಕ್ಕಿದೆ. ಒಟ್ಟು 30 ನಗರಗಳನ್ನು ಸ್ಮಾರ್ಟ್ ಸಿಟಿಗಳನ್ನಾಗಿ ಕೇಂದ್ರ ನಗರಾಭಿವೃದ್ದಿ ಸಚಿವ ವೆಂಕಯ್ಯ ನಾಯ್ಡು ಘೋಷಿಸಿದ್ದು, ಇದರಲ್ಲಿ ಬೆಂಗಳೂರಿಗೆ 7 ನೇ ಸ್ಥಾನ ದೊರೆತಿದೆ.

ಈ ಹಿಂದೆ ರಾಜ್ಯದ ಆರು ನಗರಗಳನ್ನು ಸ್ಮಾರ್ಟ್ ಸಿಟಿ ಯೋಜನೆಗಳ ಪಟ್ಟಿಯಲ್ಲಿ ಸೇರಿಸಲಾಗಿದ್ದು, ಅಭಿವೃದ್ದಿ ಕಾಮಗಾರಿಗಳು ಭರದಿಂದ ನಡೆಯುತ್ತಿವೆ. ಈಗಾಗಲೇ ಎರಡು ಬಾರಿ ಸ್ಮಾರ್ಟ್ ಸಿಟಿ ನಗರಗಳ ಪಟ್ಟಿಯನ್ನು ಘೋಷಿಸಲಾಗಿತ್ತಾದರೂ ಬೆಂಗಳೂರಿಗೆ ಮಾತ್ರ ಸ್ಥಾನ ದೊರೆತಿರಲಿಲ್ಲ.

ಇದೀಗ ಕೇಂದ್ರ ಸರ್ಕಾರದ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಬೆಂಗಳೂರು ನಗರ ಆಯ್ಕೆಯಾಗಿದ್ದು, ಈಗಾಗಲೇ ವಿಶ್ವ ಮಟ್ಟದಲ್ಲಿ ಮಾನ್ಯತೆ ಪಡೆದಿರುವ ಬೆಂಗಳೂರು ನಗರ ಮತ್ತಷ್ಟು ಅಭಿವೃದ್ದಿ ಹೊಂದಲು ಸಹಕಾರಿಯಾಗಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...