alex Certify
ಕನ್ನಡ ದುನಿಯಾ       Mobile App
       

Kannada Duniya

ಭೀಕರ ಬಸ್ ಅಪಘಾತದಲ್ಲಿ 7 ಮಂದಿ ಸಾವು

ಚೆನ್ನೈ: ಎರಡು ಖಾಸಗಿ ಬಸ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕನ್ನಡಿಗರೂ ಸೇರಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸೇಲಂ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಮಿಂಗಮ್ ಬಳಿ ನಡೆದಿದೆ.

ಬೆಂಗಳೂರಿನಿಂದ ಸೇಲಂಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಸೇಲಂನಿಂದ ಧರ್ಮಪುರಿಗೆ ಬರುತ್ತಿದ್ದ ಮತ್ತೊಂದು ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿ ಒಟ್ಟು 7 ಪ್ರಯಾಣಿಕರು ಸಾವನ್ನಪ್ಪಿದ್ದಾರೆ.

ಮೃತರಲ್ಲಿ ಕರ್ನಾಟಕದ ಮೂವರು ಸೇರಿದ್ದಾರೆ ಎಂದು ತಿಳಿದುಬಂದಿದೆ. ಮೃತಪಟ್ಟವರ ಗುರುತು ಹಿಡಿಯಲಾಗದಷ್ಟು ದೇಹ ಛಿದ್ರವಾಗಿದೆ. ಇನ್ನು ಬಸ್ ನಲ್ಲಿದ್ದ 37 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಸೇಲಂನಿಂದ ಬರುತ್ತಿದ್ದ ಬಸ್ ಚಾಲಕ ರಸ್ತೆ ಮಧ್ಯದಲ್ಲಿ ನಿಂತಿದ್ದ ಲಾರಿಯನ್ನು ತಪ್ಪಿಸಲು ಹೋಗಿ ಈ ಅವಘಡ ಸಂಭವಿಸಿದೆ. ಸುರಮಂಗಲಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗಾಯಾಳುಗಳನ್ನು ಅಸ್ಪತ್ರೆಗೆ ದಾಖಲಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...