alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯದಲ್ಲಿ ಮುಂದುವರಿದ ವರುಣನ ಆರ್ಭಟ: ಸಿಡಿಲಿಗೆ 8 ಮಂದಿ ಬಲಿ

ರಾಜ್ಯದ ಹಲವು ಭಾಗಗಳಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ ಅಕಾಲಿಕ ಮಳೆ ಮುಂದುವರೆದಿದ್ದು, ಬುಧವಾರದಂದು ಗುಡುಗು, ಸಿಡಿಲು, ಗಾಳಿಯ ಆರ್ಭಟಕ್ಕೆ ಎಂಟು ಮಂದಿ ಬಲಿಯಾಗಿದ್ದಾರೆ.

ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ರೌಡಕುಂದಾ ಬಳಿಯ ರಾಮ ಕ್ಯಾಂಪ್ ನಲ್ಲಿ ಸಿಡಿಲು ಬಡಿದು ಶರಣಮ್ಮ ಎಂಬ ಮಹಿಳೆ ಮೃತಪಟ್ಟಿದ್ದಾರೆ. ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನ ಧರ್ಮಸಾಗರ ಹೊರವಲಯದ ಹೊಲದಲ್ಲಿ ಸಿಡಿಲಿಗೆ ಮಂಜುಳ ಎಂಬವರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಆರು ಜನ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮತ್ತೊಂದು ಘಟನೆಯಲ್ಲಿ ನಡೆದು ಹೋಗುತ್ತಿದ್ದ ಸೋಮಶೇಖರ್ ಎಂಬವರಿಗೆ ಸಿಡಿಲು ಬಡಿದ ಪರಿಣಾಮ ಸಾವನ್ನಪ್ಪಿದ್ದಾರೆ. ಕುರುಗೋಡು ತಾಲೂಕಿನ ಎಮ್ಮಿಗನೂರು ಬಳಿಯ ಬಳಗ ಗ್ರಾಮದಲ್ಲಿ ಕುರಿ ಮೇಯಿಸಿಕೊಂಡು ಮನೆಗೆ ತೆರಳುತ್ತಿದ್ದ ಕುರಿಗಾಹಿ ಮಲ್ಲಿಕಾರ್ಜುನ ಸಿಡಿಲಿಗೆ ಬಲಿಯಾಗಿದ್ದಾನೆ. ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಗುತ್ತೂರು ಗ್ರಾಮದಲ್ಲಿ ಸಿಡಿಲು ಬಡಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ. ಗದಗ ಜಿಲ್ಲೆಯಲ್ಲಿ ಕುರಿಗಾಯಿ ಬಾಲಕನೊಬ್ಬ ಸಿಡಿಲಿಗೆ ಬಲಿಯಾಗಿದ್ದರೆ, ಹಾವೇರಿ ಜಿಲ್ಲೆಯಲ್ಲಿ ಮರದ ಕೆಳಗೆ ನಿಂತ ರೈತನೊಬ್ಬ ಸಿಡಿಲಿನಿಂದಾಗಿ ಸಾವನ್ನಪ್ಪಿದ್ದಾನೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...