alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಲೇಜು ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ ಉನ್ನತ ಶಿಕ್ಷಣ ಇಲಾಖೆ

ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ಇಂದು ಆಧಾರ್ ಕಾರ್ಡ್ ಅನಿವಾರ್ಯವಾಗಿರುವ ಕಾರಣ ಉನ್ನತ ಶಿಕ್ಷಣ ಇಲಾಖೆ ಈಗ ಸುತ್ತೋಲೆಯೊಂದನ್ನು ಹೊರಡಿಸಿದ್ದು, ರಾಜ್ಯದ ಎಲ್ಲಾ ಸರ್ಕಾರಿ ಪ್ರಥಮ ದರ್ಜೆ ಹಾಗೂ ಖಾಸಗಿ ಅನುದಾನಿತ ಪದವಿ ಕಾಲೇಜುಗಳಲ್ಲಿ ‘ಆಧಾರ್ ನೋಂದಣಿ ಹಾಗೂ ಅಪ್ಡೇಟ್ ಕ್ಯಾಂಪ್’ ಗಳನ್ನು ನಡೆಸುವಂತೆ ಸೂಚಿಸಲಾಗಿದೆ.

ಚಾಲನಾ ಪರವಾನಿಗೆ, ವಿದ್ಯಾರ್ಥಿ ವೇತನ, ಬ್ಯಾಂಕ್ ಖಾತೆ, ಸ್ಪರ್ಧಾತ್ಮಕ ಪರೀಕ್ಷೆ, ಪಾಸ್ ಪೋಟ್ ಸೇರಿದಂತೆ ಅನೇಕ ಕಾರ್ಯಗಳಿಗೆ ಆಧಾರ್ ಅನಿವಾರ್ಯವಾಗಿದ್ದು, ಹೀಗಾಗಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಖಾಸಗಿ ಅನುದಾನಿತ ಪದವಿ ಕಾಲೇಜುಗಳ ಪ್ರಾಂಶುಪಾಲರು ಈ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವಂತೆ ಹೇಳಲಾಗಿದೆ.

ಆಧಾರ್ ನೋಂದಣಿ ಮಾಡಿಸದ ವಿದ್ಯಾರ್ಥಿಗಳಿಗೆ ಯಾವುದೇ ಕಾರಣಕ್ಕೂ ಪ್ರವೇಶ ನಿರಾಕರಿಸುವಂತಿಲ್ಲವೆಂದು ಸುತ್ತೋಲೆಯಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದ್ದು, ಇಂತಹ ವಿದ್ಯಾರ್ಥಿಗಳಿಗೆ ಆಧಾರ್ ಮಾಡಿಸಲು ಕಾಲೇಜುಗಳಲ್ಲೇ ಆಧಾರ್ ನೋಂದಣಿ ಅಥವಾ ಅಪ್ ಡೇಟ್ ಕ್ಯಾಂಪ್ ಏರ್ಪಡಿಸಬೇಕು ಇಲ್ಲದಿದ್ದರೆ ಹತ್ತಿರದಲ್ಲಿ ಲಭ್ಯವಿರುವ ಆಧಾರ್ ನೋಂದಣಿ ಕೇಂದ್ರಗಳ ಮೂಲಕ ನೋಂದಣಿಗೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...