alex Certify
ಕನ್ನಡ ದುನಿಯಾ       Mobile App
       

Kannada Duniya

ಎಎಪಿ ಮೊದಲ ಪಟ್ಟಿ: ಮಾಜಿ ಐಎಎಸ್ ಅಧಿಕಾರಿ-ಆಟೋ ಚಾಲಕನಿಗೆ ಟಿಕೆಟ್

ಆಮ್ ಆದ್ಮಿ ಪಕ್ಷ ದೆಹಲಿಯಿಂದ ಪಂಜಾಬ್ ವರೆಗೆ ತೊಂದರೆಗಳನ್ನು ಎದುರಿಸುತ್ತಿದ್ದರೂ ಅದ್ರ ಉತ್ಸಾಹ ಮಾತ್ರ ಕಡಿಮೆಯಾಗಿಲ್ಲ. ಕರ್ನಾಟಕ ವಿಧಾನಸಭೆ ಚುನಾವಣೆಗೆ ಆಮ್ ಆದ್ಮಿ ಪಕ್ಷ ಸಿದ್ಧವಾಗ್ತಿದೆ. ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಜ್ಜಾಗಿದೆ.

ಆಮ್ ಆದ್ಮಿ ಪಕ್ಷ 18 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನೂ ಬಿಡುಗಡೆ ಮಾಡಿದೆ. ಈ ಮೊದಲ ಪಟ್ಟಿಯಲ್ಲಿ ಮಾಜಿ ಐಎಎಸ್ ಅಧಿಕಾರಿಯಿಂದ ಹಿಡಿದು ಆಟೋ ಚಾಲಕರೂ ಸ್ಥಾನ ಪಡೆದಿದ್ದಾರೆ. ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ ಪಕ್ಷ ಶೀಘ್ರವೇ ಎರಡನೇ ಪಟ್ಟಿ ಬಿಡುಗಡೆ ಮಾಡಲಿದೆಯಂತೆ.

ಎಎಪಿ ರಾಷ್ಟ್ರೀಯ ಕಾರ್ಯಕಾರಿ ಸದಸ್ಯ ಪೃಥ್ವಿ ರೆಡ್ಡಿ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಪಕ್ಷ ಕರ್ನಾಟಕದ ಎಲ್ಲ 224 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧೆ ನಡೆಸಲು ಚಿಂತನೆ ನಡೆಸಿದೆ. ಉತ್ತಮ ಅಭ್ಯರ್ಥಿ ಹಾಗೂ ಆರ್ಥಿಕ ಸ್ಥಿತಿಯಲ್ಲಿ ಸಮಸ್ಯೆ ಕಂಡು ಬಂದಲ್ಲಿ ಪಕ್ಷ ಕನಿಷ್ಠ 112 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಎಂದಿದ್ದಾರೆ.

ಶಾಂತಿ ನಗರ ವಿಧಾನಸಭೆಯಿಂದ ಮಾಜಿ ಐಎಎಸ್ ಅಧಿಕಾರಿ ರೇಣುಕಾ ವಿಶ್ವನಾಥನ್ ಸ್ಪರ್ಧಿಸಲಿದ್ದಾರೆ. ಇನ್ನು ಶಿವಾಜಿನಗರದಿಂದ ಆಟೋ ಚಾಲಕ ಆಯುಬ್ ಖಾನ್ ಕಣಕ್ಕಿಳಿಯಲಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...