alex Certify
ಕನ್ನಡ ದುನಿಯಾ       Mobile App
       

Kannada Duniya

ಮುಂದುವರಿದ ಎಬಿವಿಪಿ ಪ್ರತಿಭಟನೆ

ABVP protest against Amnesty International for allegedly shouting anti-India slogans in Bengaluruಬೆಂಗಳೂರಿನ ಮಿಲ್ಲರ್ಸ್ ರಸ್ತೆಯ ಯುನೈಟೆಡ್ ಥಿಯೋಲಾಜಿಕಲ್ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಕೆಲವರು ರಾಷ್ಟ್ರ ವಿರೋಧಿ ಘೋಷಣೆ ಕೂಗಿದ್ದು, ಅವರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಮಂಗಳವಾರದಿಂದ ಪ್ರತಿಭಟನೆ ನಡೆಸುತ್ತಿರುವ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಇಂದೂ ಕೂಡಾ ಪ್ರತಿಭಟನೆ ಮುಂದುವರೆಸಿದೆ.

ಬೆಂಗಳೂರು ಮಾತ್ರವಲ್ಲದೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ಎಫ್ಐಆರ್ ದಾಖಲಾಗಿ ಮೂರ್ನಾಲ್ಕು ದಿನಗಳಾದರೂ ಯಾರೊಬ್ಬರನ್ನೂ ಬಂಧಿಸದಿರುವುದಕ್ಕೆ ಪ್ರತಿಭಟನಾನಿರತ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಲ್ಲದೇ, ಮಂಗಳವಾರ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡಿದ್ದನ್ನೂ ಖಂಡಿಸಲಾಗಿದೆ. ರಾಷ್ಟ್ರ ವಿರೋಧಿ ಘೋಷಣೆ ಕೂಗಿದವರನ್ನು ಹಾಗೂ ಕಾರ್ಯಕ್ರಮ ಆಯೋಜಿಸಿದವರನ್ನು ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವ ಎಚ್ಚರಿಕೆಯನ್ನೂ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೀಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...