alex Certify
ಕನ್ನಡ ದುನಿಯಾ       Mobile App
       

Kannada Duniya

ಎಸಿಬಿ ಸ್ಥಾಪನೆಗೆ ಹೈಕಮಾಂಡ್ ಗರಂ

sonia ga

ಬೆಂಗಳೂರು: ರಾಜ್ಯದಲ್ಲಿ ಏಕಾಏಕಿ ಭ್ರಷ್ಟಾಚಾರ ನಿಗ್ರಹದಳ (ಎಸಿಬಿ) ಸ್ಥಾಪಿಸಿರುವ ರಾಜ್ಯ ಸರ್ಕಾರದ ನಡೆಗೆ ಕಾಂಗ್ರೆಸ್ ಹೈಕಮಾಂಡ್ ಗರಂ ಆಗಿದೆ. ಸಾರ್ವಜನಿಕರು, ರಾಜಕೀಯ ಪಕ್ಷಗಳ ಜೊತೆ ಚರ್ಚಿಸದೇ ಏಕಪಕ್ಷೀಯ ನಿರ್ಧಾರ ಕೈಗೊಂಡಿರುವುದು ಸರಿಯಲ್ಲ ಎಂದು ಕಾಂಗ್ರೆಸ್ ಹೈಕಮಾಂಡ್ ಅಸಮಾಧಾನ ವ್ಯಕ್ತಪಡಿಸಿದೆ.

ಭ್ರಷ್ಟಾಚಾರ ನಿಗ್ರಹದಳ ಏಕಾಏಕಿ ಸ್ಥಾಪಿಸಿ, ಎಡಿಜಿಪಿಯಾಗಿ ಕೆ.ವಿ.ಗಗನ್ ದೀಪ್ ಮತ್ತು ಐಜಿಪಿಯಾಗಿ ಎಂ.ಎ. ಸಲೀಂ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದ್ದು, ಸೋಮವಾರ ಇವರು, ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಈ ಬೆಳವಣಿಗೆಗಳ ಬಗ್ಗೆ ರಾಜ್ಯದ ಹಿರಿಯ ಕಾಂಗ್ರೆಸ್ ನಾಯಕರು ಹೈಕಮಾಂಡ್ ಗಮನಕ್ಕೆ ತಂದಿದ್ದು, ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ, ಉಪಾಧ್ಯಕ್ಷ ರಾಹುಲ್ ಗಾಂಧಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ.

ದೇಶದಲ್ಲಿ ಮಾದರಿಯಾಗಿದ್ದ ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ಅಧಿಕಾರವನ್ನು ಮೊಟಕುಗೊಳಿಸುವ ಸರ್ಕಾರದ ನಿರ್ಧಾರ ಸರಿಯಾಗಿಲ್ಲ ಎಂಬ ಮಾತುಗಳು ಕೇಳಿಬಂದಿದ್ದು, ಇದರಿಂದ ಕಾಂಗ್ರೆಸ್ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗಲಿದೆ ಎಂದು ಹೈಕಮಾಂಡ್ ಗೆ ರಾಜ್ಯ ಕಾಂಗ್ರೆಸ್ ಹಿರಿಯ ನಾಯಕರು ದೂರು ನೀಡಿದ್ದರೆನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...