alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಳ್ಳಂಬೆಳಿಗ್ಗೆ ಬಿಸಿ ಮುಟ್ಟಿಸಿದ ಎ.ಸಿ.ಬಿ. ಅಧಿಕಾರಿಗಳು

ಬಳ್ಳಾರಿ: ಬಳ್ಳಾರಿಯಲ್ಲಿ ಎ.ಸಿ.ಬಿ. ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ಕಾರ್ಯಾಚರಣೆ ನಡೆಸಿದ್ದಾರೆ. ಬಳ್ಳಾರಿಯ ಕುವೆಂಪು ನಗರದಲ್ಲಿರುವ ಅಧಿಕಾರಿ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ.

ತೋರಣಗಲ್ ವಿಜಯನಗರ ಅಭಿವೃದ್ಧಿ ಪ್ರಾಧಿಕಾರದ ಕಮಿಷನರ್ ಪಕ್ಷಾವಲಿ ಅವರ ನಿವಾಸದ ಮೇಲೆ ಎ.ಸಿ.ಬಿ. ಎಸ್.ಪಿ. ಪ್ರಸನ್ನ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ದಾಳಿಯ ಸಂದರ್ಭದಲ್ಲಿ ಅಪಾರ ಪ್ರಮಾಣದ ನಗದು, ಚಿನ್ನಾಭರಣ ಹಾಗೂ ಆಸ್ತಿ ದಾಖಲೆ ಪತ್ರಗಳು ಪತ್ತೆಯಾಗಿವೆ. ಅಕ್ರಮವಾಗಿ ಆಸ್ತಿ ಸಂಪಾದನೆ ಮಾಡಿದ ಆರೋಪದ ಹಿನ್ನಲೆಯಲ್ಲಿ ಮಾಹಿತಿ ಕಲೆ ಹಾಕಿದ ಎ.ಸಿ.ಬಿ. ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.

ಬಳ್ಳಾರಿಯಲ್ಲಿ ಏಕಕಾಲಕ್ಕೆ 4 ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...