alex Certify
ಕನ್ನಡ ದುನಿಯಾ       Mobile App
       

Kannada Duniya

ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದ ಇಂಜಿನಿಯರ್ ಗಳು

ಬಾಗಲಕೋಟೆ : 2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಇಂಜಿನಿಯರ್ ಗಳಿಬ್ಬರು ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಬಿದ್ದಿದ್ದಾರೆ.

ಭೂಸೇನಾ ನಿಗಮದ ಕಚೇರಿಯ ಇಂಜಿಯರ್ ಗಳಿಬ್ಬರು, ನಂದಕುಮಾರ್ ಕೋರೆ ಅವರಿಂದ 2 ಲಕ್ಷ ರೂ. ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಎ.ಸಿ.ಬಿ. ಡಿ.ವೈ.ಎಸ್.ಪಿ. ಮಲ್ಲೇಶ್ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ಶುದ್ಧ ಕುಡಿಯುವ ನೀರು ಘಟಕದ ಕಾಮಗಾರಿ ಪೂರ್ಣಗೊಳಿಸಿದ್ದ ನಂದಕುಮಾರ್ ಅವರಿಗೆ, 16 ಲಕ್ಷ ರೂ. ವೆಚ್ಚದ 6 ಚೆಕ್ ಗಳನ್ನು ನೀಡಲು ಇಂಜಿನಿಯರ್ ಗಳು 6.30 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಮೊದಲ ಕಂತಾಗಿ 2 ಲಕ್ಷ ರೂ. ಪಡೆಯುವಾಗ ಎ.ಸಿ.ಬಿ. ಅಧಿಕಾರಿಗಳು ದಾಳಿ ನಡೆಸಿ ಬಂಧಿಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...