alex Certify BREAKING: ಬೆಳ್ಳಂಬೆಳಗ್ಗೆ ಎಸಿಬಿ ದಾಳಿ, ಮೈಸೂರಲ್ಲಿ ಎಸಿಎಫ್ ನಿವಾಸ ಸೇರಿ 5 ಕಡೆ ರೇಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬೆಳ್ಳಂಬೆಳಗ್ಗೆ ಎಸಿಬಿ ದಾಳಿ, ಮೈಸೂರಲ್ಲಿ ಎಸಿಎಫ್ ನಿವಾಸ ಸೇರಿ 5 ಕಡೆ ರೇಡ್

ಮೈಸೂರಿನಲ್ಲಿ ಬೆಳ್ಳಂಬೆಳಗ್ಗೆ ಭ್ರಷ್ಟಾಚಾರ ನಿಗ್ರಹದಳದ(ಎಸಿಬಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಸಿಎಫ್ ಶಿವಶಂಕರ್ ಅವರ ಮನೆ ಮೇಲೆ ದಾಳಿ ಮಾಡಿ ದಾಖಲೆ ಪರಿಶೀಲನೆ ನಡೆಸಿದ್ದಾರೆ.

ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿದ್ದ ಆರೋಪದ ಮೇಲೆ ಶಿವಶಂಕರ್ ಅವರಿಗೆ ಸೇರಿದ ಮನೆ ಸೇರಿದಂತೆ 5 ಕಡೆ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ಮೈಸೂರಿನ ನಜರಾಬಾದ್, ಸರಸ್ವತಿಪುರಂ, ಜೆಸಿ ಬಡಾವಣೆ, ಮಳವಳ್ಳಿ ಸೇರಿ 5 ಕಡೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಆರೋಪದ ಹಿನ್ನೆಲೆಯಲ್ಲಿ ಎಸಿಎಫ್ ಶಿವಶಂಕರ್ ಮನೆ ಸೇರಿ ಏಕಕಾಲದಲ್ಲಿ 5 ಕಡೆ ದಾಳಿ ನಡೆಸಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...