alex Certify
ಕನ್ನಡ ದುನಿಯಾ       Mobile App
       

Kannada Duniya

ಎಸಿಬಿಯಲ್ಲಿ ಸಿದ್ದರಾಮಯ್ಯ ವಿರುದ್ದವೇ ಮೊದಲ ದೂರು !

hqdefault

ಭಾರೀ ವಿರೋಧದ ನಡುವೆಯೂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ, ರಾಜ್ಯದಲ್ಲಿ ಲೋಕಾಯುಕ್ತದ ಬಲ ಕುಗ್ಗಿಸುವ ನಿಟ್ಟಿನಲ್ಲಿ ರಚಿಸಿರುವ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧವೇ ಮೊದಲ ದೂರು ದಾಖಲಾಗಿದ್ದು, ಕುತೂಹಲಕ್ಕೆ ಕಾರಣವಾಗಿದೆ.

ಹೌದು. ಎಸಿಬಿ ರಚನೆಯಾಗುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದುಬಾರಿ ವಾಚ್ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಕೋರಿ ಹೈಕೋರ್ಟ್ ವಕೀಲ ನಟರಾಜ್ ಶರ್ಮಾ ಅವರು ಶನಿವಾರ ಎಸಿಬಿಗೆ ದೂರು ನೀಡಿದ್ದು, ಆ ಮೂಲಕ ಸಿದ್ದರಾಮಯ್ಯ ಅವರಿಗೇ ಮೊದಲ ಸಂಕಷ್ಟ ಎದುರಾದಂತಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದುಬಾರಿ ವಾಚ್ ಅಕ್ರಮವಾಗಿ ಬಂದಿರುವ ಸಾಧ್ಯತೆ ಇದ್ದು, ಹಾಗಾಗಿ ಈ ಕುರಿತು ಸಮರ್ಪಕ ತನಿಖೆಯಾಗಬೇಕು ಎಂದು ಮನವಿ ಮಾಡಿರುವ ದೂರುದಾರ ನಟರಾಜ್ ಶರ್ಮಾ, ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದೊರೆಯದ ಹಿನ್ನೆಲೆಯಲ್ಲಿ ದೂರನ್ನು ನೇರವಾಗಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಗೆ ಸಲ್ಲಿಸಿದ್ದು, ಹಾಗಾಗಿ ಎಸಿಬಿ ಈ ದೂರಿನ ಕುರಿತು ಯಾವ ರೀತಿ ತನಿಖೆ ನಡೆಸುತ್ತದೆ ಎಂಬುದನ್ನು ಕಾಯ್ದು ನೋಡಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...