alex Certify
ಕನ್ನಡ ದುನಿಯಾ       Mobile App
       

Kannada Duniya

ಭೀಕರ ಅಪಘಾತದಲ್ಲಿ ಮೂವರು ವಿದ್ಯಾರ್ಥಿಗಳ ಬಲಿ

ರಾಮನಗರ: ಬೀಗರ ಊಟಕ್ಕೆಂದು ಹೋಗುತ್ತಿದ್ದ ವೇಳೆ ಸ್ಕಾರ್ಪಿಯೊ ಕಾರಿನ ಟೈಯರ್ ಸಿಡಿದು ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಾಗಮಂಗಲದ ಬಳಿ ನಡೆದಿದೆ.

ಮೃತರು ರಕ್ಷನ್(22) ಉಜ್ವಲ್(22) ರಮೇಶ್(22) ಎಂದು ಗುರುತಿಸಲಾಗಿದೆ. ಬೆಂಗಳೂರು-ಕುಣಿಗಲ್ ರಾಷ್ಟ್ರೀಯ ಹೆದ್ದಾರಿ ತಿಗಳರ ಪಾಳ್ಯ ಬಳಿ ಈ ದುರ್ಘಟನೆ ನಡೆದಿದ್ದು, ನಾಗಮಂಗಲದಲ್ಲಿ ಬೀಗರ ಊಟಕ್ಕೆಂದು ಕಾರಿನಲ್ಲಿ 9 ಜನರು ಹೊರಟಿದ್ದರು. ಕಾರಿನಲ್ಲಿದ್ದ ಇನ್ನುಳಿದ ಆರು ಮಂದಿಗೆ ಗಂಭೀರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರು ಬೆಂಗಳೂರಿನ‌ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ಸ್ಥಳಕ್ಕಾಗಮಿಸಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...