alex Certify
ಕನ್ನಡ ದುನಿಯಾ       Mobile App
       

Kannada Duniya

ಕಾರು ಪಲ್ಟಿಯಾಗಿ ಇಬ್ಬರ ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿ ಓರ್ವ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ.

ನೆಲಮಂಗಲ ತಾಲೂಕಿನ ಎಂಟಗಾನಹಳ್ಳಿ ಬಳಿ ಈ ಅಪಘಾತ ನಡೆದಿದ್ದು, ಹಾಸನ ಜಿಲ್ಲೆ ಹೊಳೆನರಸೀಪುರದ ಶ್ರೀಧರ್ ಹಾಗೂ ಪುನೀತ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಸುಮನ್ ಎಂಬವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬ್ಯಾರಿಕೇಡ್ ಮುರಿದು ರಸ್ತೆಯಿಂದ ಹೊರ ಬಿದ್ದ ಕಾರು ಪಲ್ಟಿಯಾಗಿದೆ ಎನ್ನಲಾಗಿದ್ದು, ನೆಲಮಂಗಲ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...