alex Certify
ಕನ್ನಡ ದುನಿಯಾ       Mobile App
       

Kannada Duniya

ಕೆ.ಎಸ್.ಆರ್.ಟಿ.ಸಿ. ಬಸ್ ಪಲ್ಟಿ: ಇಬ್ಬರ ಸಾವು

ಬೆಳಗಾವಿಯಿಂದ ಉಡುಪಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.

ಬೆಳಗಾವಿ ತಾಲೂಕಿನ ಬಡೇಕೊಳ್ಳ ಸಮೀಪದ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಇಂದು ಬೆಳಗಿನ ಜಾವ ಈ ದುರ್ಘಟನೆ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾಗಿದೆ ಎನ್ನಲಾಗಿದೆ.

ಅಪಘಾತದಲ್ಲಿ ಕಿತ್ತೂರು ತಾಲೂಕಿನ ನಿಚ್ಚನಿಕ್ಕಿ ಗ್ರಾಮದ ಅಶೋಕ ಹಾಗೂ ಮತ್ತೊಬ್ಬರು ಮೃತಪಟ್ಟಿದ್ದು, ಗಾಯಗೊಂಡಿರುವ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿರುವ ಹಿರೇಬಾಗೇವಾಡಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...