alex Certify
ಕನ್ನಡ ದುನಿಯಾ       Mobile App
       

Kannada Duniya

ಪರಾರಿಯಾಗುವಾಗಲೇ ಪರಲೋಕ ಸೇರಿದ ಕಳ್ಳರು

deadly-accident

ಬೆಂಗಳೂರು: ಸಾವೆನ್ನುವುದು ಹೇಗೆಲ್ಲಾ ಬರುತ್ತದೆ ಎಂಬುದಕ್ಕೆ ನಿದರ್ಶನವಾಗಬಹುದಾದ ಘಟನೆಯೊಂದು ಬೆಂಗಳೂರಿನಲ್ಲಿ ತಡರಾತ್ರಿ ನಡೆದಿದೆ. ದರೋಡೆ ಮಾಡಿ ಪರಾರಿಯಾಗುವ ಯತ್ನದಲ್ಲಿ ಕಳ್ಳರಿಬ್ಬರು ದುರಂತ ಸಾವನ್ನಪ್ಪಿದ್ದಾರೆ.

ತಡರಾತ್ರಿ 2 ಗಂಟೆ ವೇಳೆಗೆ ಯಶವಂತಪುರದಲ್ಲಿ ವ್ಯಕ್ತಿಯೊಬ್ಬರನ್ನು ಬೆದರಿಸಿ ಹಣ ಹಾಗೂ ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದ ಇಬ್ಬರು ಜೋರಾಗಿ ಬೈಕ್ ನಲ್ಲಿ ಹೋಗುವಾಗ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದುಕೊಂಡು ಸಾವನ್ನಪ್ಪಿದ್ದಾರೆ. ಸಂತೋಷ್, ಅಭಿಲಾಷ್ ಮೃತಪಟ್ಟವರು. ಇವರಿಬ್ಬರು ಹಾಗೂ ಇನ್ನಿಬ್ಬರು ಎರಡು ಪಲ್ಸರ್ ಬೈಕ್ ಗಳಲ್ಲಿ ಬಂದಿದ್ದು, ಯಶವಂತಪುರದ ಒರಾಯನ್ ಮಾಲ್ ಸಮೀಪ ಪ್ರಯಾಣಿಕರೊಬ್ಬರನ್ನು ಚಾಕು ತೋರಿಸಿ ಬೆದರಿಸಿದ್ದಾರೆ. ಅವರಿಂದ ಹಣ, ಮೊಬೈಲ್ ಕಸಿದು ಪರಾರಿಯಾಗಿದ್ದಾರೆ.

ಹೀಗೆ ಹೋಗುವ ಧಾವಂತದಲ್ಲಿ ಬೈಕ್ ನಿಯಂತ್ರಣ ತಪ್ಪಿದ್ದು, ಇಸ್ಕಾನ್ ದೇವಾಲಯದ ಬಳಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದುಕೊಂಡಿದ್ದಾರೆ. ಅವರಲ್ಲಿ ಸಂತೋಷ್ ಸ್ಥಳದಲ್ಲೇ ಸಾವು ಕಂಡರೆ ಅಭಿಲಾಷ್ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ. ಈ ಸಂಬಂಧ ಸುಬ್ರಹ್ಮಣ್ಯ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...