alex Certify
ಕನ್ನಡ ದುನಿಯಾ       Mobile App
       

Kannada Duniya

ಸಹೋದರಿಯೊಂದಿಗೆ ಹೋಗುತ್ತಿರುವಾಗಲೇ ನಡೆದಿದೆ ಘೋರ ದುರಂತ

ಯುವಕನೊಬ್ಬ ತನ್ನ ಸಹೋದರಿಯನ್ನು ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಹೋಗುತ್ತಿದ್ದ ವೇಳೆ ನಿಂತಿದ್ದ ಲಾರಿಗೆ ಆಕಸ್ಮಿಕವಾಗಿ ವಾಹನ ಡಿಕ್ಕಿಯಾದ ಪರಿಣಾಮ ಅಣ್ಣ-ತಂಗಿ ಸಾವನ್ನಪ್ಪಿರುವ ದಾರುಣ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ನಡೆದಿದೆ.

19 ವರ್ಷದ ಅಮೋಘ ಹಾಗೂ ಅವರ ಸಹೋದರಿ 14 ವರ್ಷದ ಅಮೋಘ ವರ್ಷಿಣಿ ಸಾವನ್ನಪ್ಪಿದ ದುರ್ದೈವಿಗಳಾಗಿದ್ದು, ಗೊರಳ್ಳಿ ಜಗದೀಶ್ ಎಂಬುವರ ಮಕ್ಕಳಾಗಿದ್ದಾರೆ.

ಅಮೋಘ ತನ್ನ ತಂಗಿಯೊಂದಿಗೆ ಗೊರಳ್ಳಿಯಿಂದ ಬೆಟ್ಟದಪುರ ಕಡೆಗೆ ಹೋಗುವ ವೇಳೆ ಪಿರಿಯಾಪಟ್ಟಣದ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಇವರುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪಿರಿಯಾಪಟ್ಟಣ ಠಾಣೆ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...