alex Certify
ಕನ್ನಡ ದುನಿಯಾ       Mobile App
       

Kannada Duniya

ಭೀಕರ ಸರಣಿ ಅಪಘಾತದಲ್ಲಿ 8 ಮಂದಿ ಸಾವು

ap 30

ಚಿತ್ರದುರ್ಗ: 3 ವಾಹನಗಳ ನಡುವೆ ನಡೆದ ಭೀಕರ ಸರಣಿ ಅಪಘಾತದಲ್ಲಿ, ಸ್ಥಳದಲ್ಲೇ 7 ಮಂದಿ ಸಾವು ಕಂಡ ಘಟನೆ, ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಗೇಟ್ ಸಮೀಪ, ಶುಕ್ರವಾರ ಬೆಳಗಿನ ಜಾವ ನಡೆದಿದೆ. ಘಟನೆಯಲ್ಲಿ 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಕೆ.ಎಸ್.ಆರ್.ಟಿ.ಸಿ. ಬಸ್, ಖಾಸಗಿ ಬಸ್ ಮತ್ತು ಕ್ರೂಸರ್ ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಕ್ರೂಸರ್ ಚಾಲಕ ಚಂದ್ರೇಗೌಡ ಹಾಗೂ 6 ಮಂದಿ ವಿದ್ಯಾರ್ಥಿನಿಯರು ಸ್ಥಳದಲ್ಲೇ ಸಾವು ಕಂಡಿದ್ದಾರೆ. ಮತ್ತೊಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. 9 ಮಂದಿ ಚಿಂತಾಜನಕ ಸ್ಥಿತಿಯಲ್ಲಿದ್ದು, ಅವರನ್ನು ಚಳ್ಳಕೆರೆ ಹಾಗೂ ಚಿತ್ರದುರ್ಗದ ಆಸ್ಪತ್ರೆಗೆ ಸೇರಿಸಲಾಗಿದೆ. ಮೂರು ವಾಹನಗಳ ಚಾಲಕರು ಅತಿವೇಗವಾಗಿ ವಾಹನ ಚಾಲನೆ ಮಾಡಿಕೊಂಡು ಬಂದಿದ್ದು, ನಿಯಂತ್ರಣಕ್ಕೆ ಸಿಗದೇ ಡಿಕ್ಕಿ ಹೊಡೆದುಕೊಂಡಿವೆ ಎನ್ನಲಾಗಿದೆ.

ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು, ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಅಪಘಾತದಿಂದಾಗಿ ಕೆಲಕಾಲ ಸಂಚಾರಕ್ಕೆ ತೊಂದರೆಯಾಗಿತ್ತು. ಈ ಸಂಬಂಧ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...