alex Certify
ಕನ್ನಡ ದುನಿಯಾ       Mobile App
       

Kannada Duniya

ಲಾರಿ ಡಿಕ್ಕಿಯಾಗಿ MBBS ವಿದ್ಯಾರ್ಥಿ ಸಾವು

ದಾವಣಗೆರೆ: ದಾವಣಗೆರೆ ಜಿಲ್ಲೆ ಜಗಳೂರು ಸಮೀಪದ ದೊಣ್ಣೆಹಳ್ಳಿ ಬಳಿ ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಎಂ.ಬಿ.ಬಿ.ಎಸ್. ವಿದ್ಯಾರ್ಥಿ ಮೃತಪಟ್ಟಿದ್ದಾರೆ.

ಕಿರಣ್(21) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಬೈಕ್ ನಲ್ಲಿದ್ದ ಅವರ ತಂದೆ ತಿಪ್ಪೇಸ್ವಾಮಿ(52) ಗಾಯಗೊಂಡಿದ್ದು, ಅವರನ್ನು ಜಗಳೂರು ಆಸ್ಪತ್ರೆಗೆ ಸೇರಿಸಲಾಗಿದೆ.

ದೊಣ್ಣೆಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 13 ರಲ್ಲಿ ಸಿಲಿಂಡರ್ ತರಲು ಬೈಕ್ ನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಚಾಲಕನನ್ನು ವಶಕ್ಕೆ ಪಡೆದಿರುವ ಪೊಲೀಸರು, ಲಾರಿಯನ್ನು ಜಪ್ತಿ ಮಾಡಿದ್ದಾರೆ.

ಜಗಳೂರು ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಲಾರಿ ಚಾಲಕನ ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣವೆನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...