alex Certify
ಕನ್ನಡ ದುನಿಯಾ       Mobile App
       

Kannada Duniya

ಅಪಘಾತದಲ್ಲಿ ಮದುಮಗಳು ಸೇರಿ 7 ಮಂದಿ ಸಾವು

batkal-acc

ಕಾರವಾರ: ಉತ್ತರ ಕನ್ನಡ ಜಿಲ್ಲೆ ಭಟ್ಕಳದ ಅನಂತವಾಡಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದ ಭೀಕರ ಅಪಘಾತದಲ್ಲಿ ಮದುಮಗಳು ಸೇರಿ 7 ಮಂದಿ ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ಹಲವಾರು ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ. ಶಿರಸಿ ತಾಲ್ಲೂಕಿನ ದಾಸನಕೊಪ್ಪದಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಮದುವೆ ದಿಬ್ಬಣದ ಟೆಂಪೋ ಹಾಗೂ ಮಂಗಳೂರಿನಿಂದ ಹೊನ್ನಾವರಕ್ಕೆ ಹೊರಟಿದ್ದ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಬಸ್ ಚಾಲಕ ಉಮೇಶ್, ಮದುಮಗಳು ದಿವ್ಯಾ, ಬೇಬಿ, ಸುಬ್ರಹ್ಮಣ್ಯ, ಟೆಂಪೋ ಚಾಲಕ ನಾಗಪ್ಪ, ಪಾಲಾಕ್ಷಿ ಸೇರಿ 7 ಮಂದಿ ಮೃತಪಟ್ಟಿದ್ದಾರೆ. 23 ಮಂದಿ ಗಾಯಗೊಂಡಿದ್ದಾರೆ.

ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಮುರ್ಡೇಶ್ವರ, ಭಟ್ಕಳ, ಮಣಿಪಾಲ್ ಆಸ್ಪತ್ರೆಗೆ ಸೇರಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...