alex Certify
ಕನ್ನಡ ದುನಿಯಾ       Mobile App
       

Kannada Duniya

ಫ್ಲೈ ಓವರ್ ಮೇಲೆ ನಡೀತು ಭೀಕರ ಅಪಘಾತ

accident mon 8

ಬೆಂಗಳೂರು: ಹಿಂಬದಿಯಿಂದ ಕಾರು ಗುದ್ದಿದ ಪರಿಣಾಮ, ಇಬ್ಬರು ಬೈಕ್ ಸವಾರರು ಮೃತಪಟ್ಟ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ನಿನ್ನೆ ರಾತ್ರಿ ನಡೆದಿದೆ. ಜಯನ್ ಹಾಗೂ ಶ್ರೀಪತಿ ರೆಡ್ಡಿ ಮೃತಪಟ್ಟವರು.

ಹಾಸನ ಮೂಲದ ಜಯನ್ ಹಾಗೂ ಬೆಂಗಳೂರು ನಿವಾಸಿ ಶ್ರೀಪತಿ ರೆಡ್ಡಿ ಪ್ರತ್ಯೇಕ ಬೈಕ್ ಗಳಲ್ಲಿ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಸಂಚರಿಸುವ ಸಂದರ್ಭದಲ್ಲಿ, ಅತಿವೇಗವಾಗಿ ಬಂದ ಇಂಡಿಕಾ ಕಾರ್ ಡಿಕ್ಕಿ ಹೊಡೆದಿದೆ. ಕಾರ್ ಡಿಕ್ಕಿ ಹೊಡೆದ ರಭಸಕ್ಕೆ ಜಯನ್ ಸ್ಥಳದಲ್ಲೇ ಸಾವು ಕಂಡಿದ್ದಾರೆ. ಶ್ರೀಪತಿ ಫ್ಲೈ ಓವರ್ ಮೇಲಿನಿಂದ ಹಾರಿ ಬಿದ್ದು, ಸಾವನ್ನಪ್ಪಿದ್ದಾರೆ. ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದು, ಇದನ್ನು ಕಂಡ ಕಾರಿನ ಚಾಲಕ ಕಾರನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಮೃತದೇಹಗಳನ್ನು ಸೇಂಟ್ ಜಾನ್ಸ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಸ್ಥಳಕ್ಕೆ ಮಡಿವಾಳ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ನಾಪತ್ತೆಯಾಗಿರುವ ಕಾರ್ ಚಾಲಕನ ಬಂಧನಕ್ಕೆ ಬಲೆ ಬೀಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...