alex Certify
ಕನ್ನಡ ದುನಿಯಾ       Mobile App
       

Kannada Duniya

ಭೀಕರ ಅಪಘಾತದಲ್ಲಿ 3 ಪೊಲೀಸ್ ಅಧಿಕಾರಿಗಳು ಸಾವು

ಬಾಗಲಕೋಟೆ: ಬಾಗಲಕೋಟೆ ಸಮೀಪದ ಸಂಗಮ ಮಲ್ಲಾಪುರ ಕ್ರಾಸ್ ಬಳಿ ನಡೆದ ಭೀಕರ ಅಪಘಾತದಲ್ಲಿ ಚುನಾವಣೆ ಕೆಲಸಕ್ಕೆ ತೆರಳುತ್ತಿದ್ದ ಮೂವರು ಪೊಲೀಸ್ ಅಧಿಕಾರಿಗಳು ಸಾವನ್ನಪ್ಪಿದ್ದಾರೆ.

ಬೆಂಗಳೂರು ಸಿ.ಐ.ಡಿ. ಡಿ.ವೈ.ಎಸ್.ಪಿ. ಬಾಳೇಗೌಡ(55), ಸಿ.ಪಿ.ಐ. ಶಿವಸ್ವಾಮಿ(55), ಚಾಲಕ ವೇಣುಗೋಪಾಲ್(45) ಸ್ಥಳದಲ್ಲೇ ಸಾವನ್ನಪ್ಪಿದವರೆಂದು ಗುರುತಿಸಲಾಗಿದೆ.

ವಿಧಾನಸಭೆ ಚುನಾವಣೆ ಕೆಲಸಕ್ಕೆಂದು ಇವರು ಬೊಲೆರೊದಲ್ಲಿ ಬಾಗಲಕೋಟೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳಿಗೆ ಹಾನಿಯಾಗಿದೆ. ಅತಿವೇಗ, ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣವೆನ್ನಲಾಗಿದೆ.

ಬಾಗಲಕೋಟೆ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...