alex Certify
ಕನ್ನಡ ದುನಿಯಾ       Mobile App
       

Kannada Duniya

ಭೀಕರ ಅಪಘಾತದಲ್ಲಿ ಇಬ್ಬರು ಸಾವು

accident sun 18

ಚಿತ್ರದುರ್ಗ: ಮುಂದೆ ಚಲಿಸುತ್ತಿದ್ದ ಲಾರಿಗೆ, ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ, ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ಬೆಳಗಿನ ಜಾವ ನಡೆದಿದೆ.

ಖಾಸಗಿ ಬಸ್ ಚಾಲಕ ಪ್ರವೀಣ್ ರೆಡ್ಡಿ ಹಾಗೂ ಕ್ಲೀನರ್ ಮಂಜುನಾಥ್ ಮೃತಪಟ್ಟವರು. ಬಸ್ ನಲ್ಲಿದ್ದ 13 ಕ್ಕೂ ಅಧಿಕ ಮಂದಿಗೆ ಗಾಯಗಳಾಗಿದ್ದು, ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಬೆಂಗಳೂರಿನಿಂದ ದಾವಣಗೆರೆಗೆ ತೆರಳುತ್ತಿದ್ದ ಖಾಸಗಿ ಬಸ್, ಹಿರಿಯೂರು ತಾಲ್ಲೂಕಿನ ಐಮಂಗಲ ಸಮೀಪ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮುಂದೆ ಚಲಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.

ಐಮಂಗಲ ಠಾಣೆ ಪೊಲೀಸರು, ಸ್ಥಳಕ್ಕೆ ಭೇಟಿ ನೀಡಿ ಅಂಬುಲೆನ್ಸ್ ನಲ್ಲಿ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರಕ್ಕೆ ತೊಂದರೆಯಾಗಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...