alex Certify
ಕನ್ನಡ ದುನಿಯಾ       Mobile App
       

Kannada Duniya

ಭೀಕರ ಅಪಘಾತದಲ್ಲಿ ಐದು ಮಂದಿ ದುರಂತ ಸಾವು

accide 369

ಲಾರಿ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಒಂದೇ ಕುಟುಂಬಕ್ಕೆ ಸೇರಿದ ಐದು ಮಂದಿ ದುರಂತ ಸಾವು ಕಂಡ ಘಟನೆ ತೆಲಂಗಾಣದಲ್ಲಿ ನಡೆದಿದೆ. ಮೃತಪಟ್ಟವರು ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ನಿವಾಸಿಗಳಾಗಿದ್ದಾರೆ.

ತೆಲಂಗಾಣದ ಮೆಹಬೂಬ್ ನಗರ ಜಿಲ್ಲೆಯ ಕೋಡಗಲ್ ಮಂಡಲ ವ್ಯಾಪ್ತಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಮಕ್ಕಳು ಸೇರಿದಂತೆ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಚಿಂಚೋಳಿ ತಾಲ್ಲೂಕಿನ ತೇಗಲವಟ್ಟೆ ಸಲಗದ ಗ್ರಾಮದ ಯಲ್ಲಪ್ಪ, ನರಸಮ್ಮ, ಅವರ 4 ವರ್ಷದ ಮಗಳು ಹಾಗೂ ಸತೀಶ್ ಮತ್ತು ಅವರ 8 ವರ್ಷದ ಪುತ್ರಿ ಮೃತಪಟ್ಟವರು. ಇವರು ಸೇಡಂ ತಾಲ್ಲೂಕಿನ ಯಾನಾಗುಂದಿಗೆ ಕಾರಿನಲ್ಲಿ ಹೊರಟಿದ್ದರು. ಆಗ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ.

ಲಾರಿ ಚಾಲಕ ಅತಿವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿದ್ದೇ ಘಟನೆಗೆ ಕಾರಣ ಎನ್ನಲಾಗಿದೆ. ಘಟನೆಯ ಸುದ್ದಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಾಹನಗಳನ್ನು ತೆರವುಗೊಳಿಸಿ ಅಸ್ತವ್ಯಸ್ತಗೊಂಡಿದ್ದ ಸಂಚಾರ ಸರಿಪಡಿಸಿದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...