alex Certify
ಕನ್ನಡ ದುನಿಯಾ       Mobile App
       

Kannada Duniya

ದುರಂತ ಸಾವು ಕಂಡ ನಟ ದರ್ಶನ್ ಅಭಿಮಾನಿ

acc 856

ಬೆಂಗಳೂರು: ಸ್ಯಾಂಡಲ್ ವುಡ್ ಸ್ಟಾರ್, ಬಾಕ್ಸ್ ಆಫೀಸ್ ಸುಲ್ತಾನ್, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಇಂದು 39 ನೇ ಹುಟ್ಟುಹಬ್ಬದ ಸಂಭ್ರಮ. ಅಪಾರ ಸಂಖ್ಯೆಯ ಅಭಿಮಾನಿಗಳು ನೆಚ್ಚಿನ ನಟ ದರ್ಶನ್ ಅವರಿಗೆ ಶುಭಾಶಯ ಕೋರಿದ್ದಾರೆ. ಅವರನ್ನು ಭೇಟಿ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ.

ಅಭಿಮಾನಿಗಳ ಸಂಭ್ರಮಾಚರಣೆಯ ನಡುವೆಯೇ ದುರಂತವೊಂದು ನಡೆದುಹೋಗಿದೆ. ದರ್ಶನ್ ಹುಟ್ಟು ಹಬ್ಬಕ್ಕೆ ಶುಭಾಶಯ ಕೋರಿ ಮನೆಗೆ ಹೊರಟಿದ್ದ ಅವರ ಅಭಿಮಾನಿಯೊಬ್ಬರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಬೆಂಗಳೂರು ಥಣಿಸಂದ್ರದ ನಿವಾಸಿಯಾಗಿರುವ 22 ವರ್ಷದ ಮಧು ಕುಮಾರ್ ಮೃತಪಟ್ಟವರು. ದರ್ಶನ್ ಅವರ ನಿವಾಸಕ್ಕೆ ತೆರಳಿ ಶುಭಾಶಯ ಕೋರಿದ ಮಧುಕುಮಾರ್ ಮನೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಬಿಎಂಟಿಸಿ ಬಸ್ ಡಿಕ್ಕಿಹೊಡೆದು ಮೃತಪಟ್ಟಿದ್ದಾರೆ.

ನಾಯಂಡಹಳ್ಳಿ ಸಮೀಪ ಮೇಲ್ಸೇತುವೆ ಬಳಿ ಚಾಲಕನ ನಿರ್ಲಕ್ಷ್ಯದಿಂದ ಅಡ್ಡಾದಿಡ್ಡಿಯಾಗಿ ಬಂದ ಬಸ್ ಡಿಕ್ಕಿ ಹೊಡೆದಿದೆ. ಮಧುಕುಮಾರ್ ಜೊತೆಗಿದ್ದ ಸುಧಾಂಶ್ ಗಾಯಗೊಂಡಿದ್ದಾರೆ. ಈ ಸಂಬಂಧ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...