alex Certify
ಕನ್ನಡ ದುನಿಯಾ       Mobile App
       

Kannada Duniya

ಗುಡ್ಡಕ್ಕೆ ಡಿಕ್ಕಿ ಹೊಡೆದ ಕಾರು: ಮೂವರ ಸಾವು

ಚಾಲಕನ ನಿಯಂತ್ರಣ ತಪ್ಪಿದ ಸ್ಕಾರ್ಪಿಯೋ ವಾಹನ ಗುಡ್ಡಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಮೂರು ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಆರೊಳ್ಳಿ ಕ್ರಾಸ್ ಬಳಿ ನಡೆದಿದೆ.

ಆನಂದಪುರ ಮೂಲದ ಕುಟುಂಬ ವಿವಾಹ ಸಮಾರಂಭಕ್ಕೆಂದು ಗೋವಾಕ್ಕೆ ತೆರಳಿ ವಾಪಸ್ ಬರುತ್ತಿರುವ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಫಾತಿಮಾ, ರುಕಿಯಾ ಹಾಗೂ ಚಾಬುಸಾಬ್ ಎಂಬವರು ಸಾವನ್ನಪ್ಪಿದ್ದಾರೆ.

ಕಾರಿನಲ್ಲಿದ್ದ ಇತರ ಆರು ಮಂದಿಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಹೊನ್ನಾವರ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...